ಹಾಸನ: ತಂದೆಯ ಕಿರುಕುಳ ತಾಳಲಾರದೆ ಪುತ್ರ ಆತ್ಮಹತ್ಯೆ!
ಮೃತನ ತಂದೆ ಸೈಯದ್ ಪಾಷಾ ಹಲವು ಸಂದರ್ಭಗಳಲ್ಲಿ ಕೌಟುಂಬಿಕ ವಿಚಾರವಾಗಿ ತನ್ನ ಮಗ ಮತ್ತು ಸೊಸೆ ವಿರುದ್ಧ ಅವಾಚ್ಯ ಶಬ್ಧಗಳಿಂದ ಜಗಳವಾಡುತ್ತಿದ್ದ ಎನ್ನಲಾಗಿದೆ.

ಹಾಸನ: ಕೌಟುಂಬಿಕ ವಿಚಾರಕ್ಕೆ ತಂದೆಯ ನಿರಂತರ ಕಿರುಕುಳ ತಾಳಲಾರದೆ ಪುತ್ರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಸೀಕೆರೆಯಲ್ಲಿ ಬುಧವಾರ ನಡೆದಿದೆ. ಮೃತನನ್ನು ಅಕಿಲ್ ಪಾಶ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತನ ತಂದೆ ಸೈಯದ್ ಪಾಷಾ ಹಲವು ಸಂದರ್ಭಗಳಲ್ಲಿ ಕೌಟುಂಬಿಕ ವಿಚಾರವಾಗಿ ತನ್ನ ಮಗ ಮತ್ತು ಸೊಸೆ ವಿರುದ್ಧ ಅವಾಚ್ಯ ಶಬ್ಧಗಳಿಂದ ಜಗಳವಾಡುತ್ತಿದ್ದ ಎನ್ನಲಾಗಿದೆ.
ಸಂಬಂಧಿಕರು ಮತ್ತು ನೆರೆಹೊರೆಯವರು ಪೊಲೀಸರ ಸಹಾಯದಿಂದ ಸೈಯದ್ ಪಾಷಾ ಮತ್ತು ಅವರ ಮಗನನ್ನು ಸಮಾಧಾನಪಡಿಸಲು ಹಲವು ಬಾರಿ ಪ್ರಯತ್ನಿಸಿದರೂ ಅದು ವಿಫಲವಾಗಿದೆ. ಈ ಸಂಬಂಧ ಸೈಯದ್ ಪಾಷಾ ವಿರುದ್ಧ ಅರಸೀಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



