ರಾಜ್ಯ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಹೆಸರು ಬದಲಾವಣೆಗೆ ಸಂಪುಟ ಸಭೆ ಅಸ್ತು

ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್​ ಅವರು, 'ಜನರ ಅಪೇಕ್ಷಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ' ಎಂದರು.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಹೆಸರು ಬದಲಾವಣೆಗೆ ಸಂಪುಟ ಸಭೆ ಅಸ್ತು
ರಾಮನಗರ
Published On :

ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಾಕರಣ ಮಾಡಲಾಗಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್​ ಅವರು, 'ಜನರ ಅಪೇಕ್ಷೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ' ಎಂದರು.

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ರಾಮನಗರ ಜಿಲ್ಲೆಯ ಕಾಂಗ್ರೆಸ್ ನಾಯಕರ ನಿಯೋಗ ಭೇಟಿಯಾಗಿತ್ತು. ಜಿಲ್ಲೆಯ ಅಭಿವೃದ್ದಿಯ ದೃಷ್ಟಿಯಿಂದ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿತ್ತು. ಇದೀಗ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಬಿಜೆಪಿ ನಾಯಕರು ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಸಂಪುಟದಲ್ಲಿ ಇದನ್ನು ಇಟ್ಟು ಒಪ್ಪಿಗೆ ಪಡೆದುಕೊಳ್ಳುವಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.