ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ
ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಜುಲೈ 31 ರಂದು ನಿವೃತ್ತಿಯಾಗುತ್ತಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಅವರ ಪತ್ನಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ರನ್ನು ನೇಮಕ ಮಾಡಲು ಒಪ್ಪಿಗೆ ನೀಡಲಾಗಿತ್ತು.
ರಜನೀಶ್ ಗೋಯೆಲ್ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ನೂತನ ಮುಖ್ಯ ಕಾರ್ಯದರ್ಶಿ ಯಾರು ಎಂಬ ಚರ್ಚೆ ನಡೆದಿತ್ತು. ಜೇಷ್ಠತೆಯಲ್ಲಿ ಕ್ರಮವಾಗಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್ ಸೇಠ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾಗಿರುವ ಶಾಲಿನಿ ರಜನೀಶ್ ಅವರ ಹೆಸರುಗಳು ಕೇಳಿಬಂದಿದ್ದವು. ಆದರೆ ಇಬ್ಬರ ಪೈಕಿ ಶಾಲಿನಿ ರಜನೀಶ್ ಅವರೇ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುವ ಸಾಧ್ಯತೆ ದಟ್ಟವಾಗಿತ್ತು. ಇದೀಗ ಶಾಲಿನಿ ರಜನೀಶ್ ಅವರನ್ನು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
1989ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



