ಪತಿ ನಿವೃತ್ತಿ, ಪತ್ನಿಗೆ ಅದೇ ಹುದ್ದೆ: ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕಕ್ಕೆ ಸಂಪುಟ ಸಭೆ ಅಸ್ತು
ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ ಪತ್ನಿ ಶಾಲಿನಿ ರಜನೀಶ್ ಅವರನ್ನು ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಶುಕ್ರವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್ ಅವರು, ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದರು.
ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಇನ್ನು ಐದು ದಿನದಲ್ಲಿ ನಿವೃತ್ತಿ ಆಗುತ್ತಾರೆ. ಹೀಗಾಗಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ರನ್ನು ನೇಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಎಚ್ ಕೆ ಪಾಟೀಲ್ ಅವರು ಮಾಹಿತಿ ನೀಡಿದರು. ಇದರೊಂದಿಗೆ ಪತಿ ನಿವೃತ್ತಿ ಬೆನ್ನಲ್ಲೇ ಅದೇ ಹುದ್ದೆ ಪತ್ನಿಗೆ ದಕ್ಕುತ್ತಿದೆ.
ರಜನೀಶ್ ಗೋಯೆಲ್ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ನೂತನ ಮುಖ್ಯ ಕಾರ್ಯದರ್ಶಿ ಯಾರು ಎಂಬ ಚರ್ಚೆ ನಡೆದಿತ್ತು. ಜೇಷ್ಠತೆಯಲ್ಲಿ ಕ್ರಮವಾಗಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್ ಸೇಠ್, ಅಭಿವೃದ್ಧಿ ಆಯುಕ್ತರಾಗಿರುವ ಶಾಲಿನಿ ರಜನೀಶ್ ಅವರ ಹೆಸರುಗಳು ಕೇಳಿಬಂದಿದ್ದವು. ಆದರೆ ಇಬ್ಬರ ಪೈಕಿ ಶಾಲಿನಿ ರಜನೀಶ್ ಅವರೇ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುವ ಸಾಧ್ಯತೆ ದಟ್ಟವಾಗಿತ್ತು. ಇದೀಗ ಶಾಲಿನಿ ರಜನೀಶ್ ಅವರು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗುವುದು ಖಚಿತವಾಗಿದೆ.
1989ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



