ರಾಜ್ಯ

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ರವಿ ಬರ್ಬರ ಹತ್ಯೆ

ಆನೇಕಲ್ ಪುರಸಭೆ ಸದಸ್ಯ ರವಿ ಅಲಿಯಾಸ್ ಸ್ಕ್ರ್ಯಾಪ್‌ ರವಿ ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ರವಿ ಬರ್ಬರ ಹತ್ಯೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಆನೇಕಲ್ ಪುರಸಭಾ ಸದಸ್ಯನ ಬರ್ಬರ ಹತ್ಯೆ ಮಾಡಿರುವ ಘಟನೆ ಬುಧವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ ಪಟ್ಟಣದ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ.

ಆನೇಕಲ್ ಪುರಸಭೆ ಸದಸ್ಯ ರವಿ ಅಲಿಯಾಸ್ ಸ್ಕ್ರ್ಯಾಪ್‌ ರವಿ ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ರವಿ ಆನೇಕಲ್‌ ಪುರಸಭೆಯ 22ನೇ ವಾರ್ಡ್‌ ಸದಸ್ಯರಾಗಿದ್ದರು.

ಹಳೆಯ ವೈಷಮ್ಯದಿಂದಾಗಿ ಈ ಹತ್ಯೆ ನಡೆದಿದೆ ಎಂದು ವರದಿಯಾಗಿದೆ. ದಾಳಿ ಮಾಡಿದವರ ಬಗ್ಗೆ ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಆನೇಕಲ್‌ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.

15 ದಿನಗಳ ಹಿಂದೆ ಸ್ಕೂಟರ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡವು ಮಾರಕಾಸ್ತ್ರಗಳ ಮೂಲಕ ಆನೇಕಲ್ ನಲ್ಲಿ ಭೀತಿ ಸೃಷ್ಟಿಸಿದ್ದರು. ಈ ವೇಳೆ ಆರೋಪಿಗಳು ಅಮಲಿನಲ್ಲಿದ್ದರು ಎನ್ನಲಾಗಿದ್ದು, ಇದರ ವಿಡಿಯೋ ವೈರಲ್ ಆಗಿತ್ತು. ಇದೇ ಆರೋಪಿಗಳು ರವಿ ಹತ್ಯೆ ಹಿಂದೆ ಇರುವ ಶಂಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.