ಕಿವುಡ, ಮೂಗರ ಬಗ್ಗೆ Instagramನಲ್ಲಿ ಅವಮಾನಕರ ವಿಡಿಯೋ; ರೇಡಿಯೊ ಜಾಕಿ ಸೇರಿ ಇಬ್ಬರ ಬಂಧನ
ರೋಹನ್ ಅವರು ಹಿಂದಿ ಭಾಷೆಯಲ್ಲಿ ರಾಜಕೀಯದ ಕುರಿತು ಮಾತನಾಡಿದ್ದರೆ, ಶರವಣ ಅದನ್ನು ಸನ್ನೆಯಲ್ಲಿ ಮಾಡಿ ಅವಹೇಳನ ಆಗುವಂತೆ ತೋರಿಸಿದ್ದರು ಎಂಬ ಆರೋಪವಿದೆ.

ಬೆಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಕಿವುಡರು ಹಾಗೂ ಮೂಗರನ್ನು ಅಪಹಾಸ್ಯ ಮಾಡುವ ಹಾಗೂ ಮನನೋಯಿಸುವ ರೀತಿಯಲ್ಲಿ ವಿಡಿಯೋ ಮಾಡಿ ಹರಿಬಿಟ್ಟಿದ್ದ ರೇಡಿಯೋ ಜಾಕಿ ಸೇರಿ ಇಬ್ಬರು ಯುವಕರನ್ನು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ರೋಹನ್ ಕಾರಿಯಪ್ಪ ಮತ್ತು ಶರವಣ ಭಟ್ಟಾಚಾರ್ಯ ಬಂಧಿತರಾದವರಾಗಿದ್ದಾರೆ. ರೋಹನ್ ಕಾರ್ಯಪ್ಪ ಅವರು ಎಫ್‌ಎಂ ರೇಡಿಯೊದಲ್ಲಿ ಜಾಕಿಯಾಗಿ ಕೆಲಸ ಮಾಡುತ್ತಿದ್ದರೆ, ಶರವಣ ಅವರು ಮನೆಯಲ್ಲೇ ಇದ್ದರು. ಯುವ ರಾಜಕಾರಣಿಗಳನ್ನು ಅಣಕಿಸುವ ಭರದಲ್ಲಿ ವಾಕ್ ಮತ್ತು ಶ್ರವಣದೋಷವುಳ್ಳವರ ಕುರಿತು ಅವಹೇಳನಕಾರಿಯಾಗಿ ರೀಲ್ಸ್ ಮಾಡಿದ್ದರು ಎನ್ನಲಾಗಿದೆ.
ರೋಹನ್ ಅವರು ಹಿಂದಿ ಭಾಷೆಯಲ್ಲಿ ರಾಜಕೀಯದ ಕುರಿತು ಮಾತನಾಡಿದ್ದರೆ, ಶರವಣ ಅದನ್ನು ಸನ್ನೆಯಲ್ಲಿ ಮಾಡಿ ಅವಹೇಳನ ಆಗುವಂತೆ ತೋರಿಸಿದ್ದರು ಎಂಬ ಆರೋಪವಿದೆ.
ಆ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಈ ವೀಡಿಯೊಗೆ ಆಕ್ಷೇಪ ವ್ಯಕ್ತವಾದ ಮೇಲೆ ಡಿಲೀಟ್ ಮಾಡಿ ಕ್ಷಮೆ ಕೋರಿದ್ದರು ಎಂದು ಮೂಲಗಳು ತಿಳಿಸಿವೆ.
ಇದರ ಬೆನ್ನಲ್ಲೇ ಆರೋಪಿಗಳನ್ನು ಬಂಧಿಸುವಂತೆ ವ್ಯಕ್ತಿಯೊಬ್ಬರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



