ರಾಜ್ಯ

ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆ: ದಿನಾಂಕ ಘೋಷಿಸಿದ ಬಿವೈ ವಿಜಯೇಂದ್ರ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 3ರಿಂದ ಬೆಂಗಳೂರಿನಿಂದ ಪಾದಯಾತ್ರೆ ಆರಂಭಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆ: ದಿನಾಂಕ ಘೋಷಿಸಿದ ಬಿವೈ ವಿಜಯೇಂದ್ರ
ಬಿವೈ ವಿಜಯೆಂದ್ರ
Published On :

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 3ರಿಂದ ಬೆಂಗಳೂರಿನಿಂದ ಪಾದಯಾತ್ರೆ ಆರಂಭಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ಬಿಜೆಪಿ, ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿದ ವಿಜಯೇಂದ್ರ, ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತೇವೆ. ಮೈಸೂರಿನಲ್ಲಿ ಆಗಸ್ಟ್ 10ರಂದು ಪಾದಯಾತ್ರೆ ಸಮಾರೋಪ ಸಮಾರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭಾಗವಹಿಸಿದ್ದರು.

ಉಭಯ ಪಕ್ಷಗಳ ಮುಖಂಡರು ಮತ್ತು ಪದಾಧಿಕಾರಿಗಳು 'ಭ್ರಷ್ಟ ಸಿಎಂ – ಭ್ರಷ್ಟ ಕಾಂಗ್ರೆಸ್" ಘೋಷಣೆಯೊಂದಿಗೆ ಮೆರವಣಿಗೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.