ತುಮಕೂರು: ಅಪಘಾತದಿಂದ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ 12ರ ಬಾಲಕಿ!
ತಿಪಟೂರು ನಗರದ ಹಳೇಪಾಳ್ಯದ ನಿವಾಸಿಯಾಗಿರುವ ಚಂದನ ಅಲ್ಲಿನ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದಳು.

ತುಮಕೂರು: 12 ವರ್ಷದ ಬಾಲಕಿಯೊಬ್ಬಳು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ 6 ಜನರ ಜೀವಕ್ಕೆ ಬೆಳಕಾಗಿದ್ದಾಳೆ.
ತಿಪಟೂರು ನಗರದ ಹಳೇಪಾಳ್ಯದ ನಿವಾಸಿಯಾಗಿರುವ ಚಂದನ ಅಲ್ಲಿನ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದಳು. ಜು.23ರಂದು ಶಾಲೆಗೆ ಹೋಗಿ ವಾಪಸ್ ಬರುವಾಗ ತಿಪಟೂರಿನಲ್ಲಿ ಅಪಘಾತವಾಗಿದೆ.
ರಸ್ತೆ ದಾಟುವಾಗ ಚಂದನಗೆ ಲಾರಿ ಡಿಕ್ಕಿ ಹೊಡೆದು ತಲೆಗೆ ಪೆಟ್ಟಾಗಿತ್ತು. ಪರಿಣಾಮ ಮೆದುಳು ನಿಷ್ಕ್ರಿಯಗೊಂಡಿತ್ತು. ಅಪಘಾತದ ಬಳಿಕ ಹಾಸನ ಮೆಡಿಕಲ್ ಕಾಲೇಜಿನಲ್ಲಿ ಚಂದನಾಗೆ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆತ ಆಕೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಳು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಚಂದನ ಸಾವನಪ್ಪಿದ್ದಾಳೆ.
ಇದೀಗ ಸಾವನ್ನಪ್ಪಿದ ಮಗಳ ಅಂಗಾಂಗ ದಾನ ಮಾಡಿ ಚಂದನ ಪೋಷಕರು ಮಾದರಿಯಾಗಿದ್ದಾರೆ. ಪೋಷಕರ ದಿಟ್ಟ ನಿರ್ಧಾರಕ್ಕೆ ಆಸ್ಪತ್ರೆಯ ಸಿಬ್ಬಂದಿ ಗೌರವ ಸಲ್ಲಿಸಿದ್ದಾರೆ.
ಚಂದನಾಳ ಅಂಗಾಂಗವನ್ನು ಮೈಸೂರು ಮತ್ತು ಬೆಂಗಳೂರಿನ 6 ಮಕ್ಕಳಿಗೆ ಜೋಡಣೆ ಮಾಡಿಸಲಾಗಿದೆ. ಇಂದು ಸಂಜೆ ತಿಪಟೂರಿನ ಹಳೆಪಾಳ್ಯದಲ್ಲಿ ಚಂದನ ಅಂತ್ಯಸಂಸ್ಕಾರ ನೆರವೇರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



