ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕೆಎಎಸ್ ಅಧಿಕಾರಿ ಹಣೆಗೆ ತಿಲಕವಿಟ್ಟ ಸಂಸದ ಸುನೀಲ್ ಬೋಸ್: Photo ವೈರಲ್
ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇಬ್ಬರೂ ಜೊತೆಯಾಗಿ ಬಂದಿದ್ದರು. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿಯಾಗಿರುವ ಸವಿತಾ ಅವರ ಹಣೆಗೆ ಸಂಸದ ಸುನೀಲ್ ಬೋಸ್ ಕುಂಕುಮ ಇರಿಸಿದ್ದಾರೆ. ಈ ವೇಳೆ ಇಬ್ಬರೂ ಗರ್ಭ ಗುಡಿಯಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮೈಸೂರು: ಚಾಮರಾಜನಗರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಸಂಸದ ಸುನೀಲ್ ಬೋಸ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲಿಯೇ ಕೆಎಎಸ್ ಅಧಿಕಾರಿ ಹಣೆಗೆ ಕುಂಕುಮ ಇಟ್ಟಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ.
ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇಬ್ಬರೂ ಜೊತೆಯಾಗಿ ಬಂದಿದ್ದರು. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿಯಾಗಿರುವ ಸವಿತಾ ಅವರ ಹಣೆಗೆ ಸಂಸದ ಸುನೀಲ್ ಬೋಸ್ ಕುಂಕುಮ ಇರಿಸಿದ್ದಾರೆ. ಈ ವೇಳೆ ಇಬ್ಬರೂ ಗರ್ಭ ಗುಡಿಯಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ನೆರವೇರಿಸುವ ವೇಳೆ ಸುನೀಲ್ ಬೋಸ್ ಹಾಗೂ ಕಾಂಗ್ರೆಸ್ನ ಅನೇಕ ಬೆಂಬಲಿಗರು ಹಾಜರಿದ್ದರು. ಅವರ ಸಮ್ಮುಖದಲ್ಲೇ ಸವಿತಾ ಅವರ ಹಣೆಗೆ ಸುನೀಲ್ಬೋಸ್ ತಿಲಕ ಇರಿಸಿದ್ದಾರೆ.
ಸುನೀಲ್ ಬೋಸ್ ಅವರ ನಡೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆ ಆಗಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅಫಿಡವಿಟ್ ಸಲ್ಲಿಸಿದ್ದರು. ಈ ಬಗ್ಗೆ ಚಾಮರಾಜನಗರ ಜಿಲ್ಲೆಯ ಬಿಜೆಪಿ ಸದಸ್ಯರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು. ಸುನೀಲ್ ಬೋಸ್ ಅವರಿಗೆ ಮದುವೆಯಾಗಿದೆ. ಆದರೆ ಅವರು ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು. ಸುನೀಲ್ ಬೋಸ್ ಹಾಗೂ ಸವಿತಾ ಅವರು ಜೊತೆಯಲ್ಲಿ ಇರುವ ಪೋಟೋಗಳನ್ನು ಬಿಜೆಪಿ ಸದಸ್ಯರು ಚುನಾವಣಾ ಆಯೋಗಕ್ಕೆ ಪುರಾವೆಯಾಗಿ ನೀಡಿದ್ದರು. ವೈವಾಹಿಕ ಜೀವನದ ಮಾಹಿತಿಯನ್ನು ಸುನೀಲ್ ಬೋಸ್ ಮರೆಮಾಚಿರುವುದು ಅನುಮಾನಾಸ್ಪದವಾಗಿದೆ. ಸವಿತಾ ಮತ್ತು ಸುನೀಲ್ ಬೋಸ್ ಮದುವೆಯಾಗಿದ್ದು, ಅವರಿಗೆ ಆರು ವರ್ಷದ ಹೆಣ್ಣುಮಗು ಕೂಡ ಇದೆ ಎಂದು ಅವರು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



