ರಾಜ್ಯ

ಪ್ರಜ್ವಲ್ ರೇವಣ್ಣ 'ಸಾಮೂಹಿಕ ಅತ್ಯಾಚಾರಿ' ಎಂದ ರಾಹುಲ್ ಗಾಂಧಿ ವಿರುದ್ಧ PIL ದಾಖಲು

ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕರ್ನಾಟಕದಲ್ಲಿ ಸಾರ್ವಜನಿಕ ಭಾಷಣ ಮಾಡಿದ್ದ ರಾಹುಲ್ ಗಾಂಧಿಯವರು ಪ್ರಜ್ವಲ್ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ನಿಂದಿಸಿದ್ದರು.

ಪ್ರಜ್ವಲ್ ರೇವಣ್ಣ 'ಸಾಮೂಹಿಕ ಅತ್ಯಾಚಾರಿ' ಎಂದ ರಾಹುಲ್ ಗಾಂಧಿ ವಿರುದ್ಧ PIL ದಾಖಲು
ವಿಪಕ್ಷ ನಾಯಕ ರಾಹುಲ್ ಗಾಂಧಿ — online desk
Published On :

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಕರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕರ್ನಾಟಕದಲ್ಲಿ ಸಾರ್ವಜನಿಕ ಭಾಷಣ ಮಾಡಿದ್ದ ರಾಹುಲ್ ಗಾಂಧಿಯವರು ಪ್ರಜ್ವಲ್ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಉಲ್ಲೇಖಿಸಿದ್ದರು.

ಇದರ ವಿಡಿಯೋ ಹಿಡಿದು ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ರಾಮು ಅವರು ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಇದೂವರೆಗೆ ಆರೋಪ ಸಾಬೀತಾಗಿಲ್ಲ. ಸಾಕ್ಷ್ಯಾಧಾರಗಳು ಲಭಿಸಿಲ್ಲ. ರಾಹುಲ್ ಗಾಂಧಿ ಹೇಳಿರುವಂತೆ ಯಾವುದೇ ಮಹಿಳೆಯರೂ ದೂರು ನೀಡಿಲ್ಲ. ಆದರೂ ರಾಹುಲ್ ಗಾಂಧಿಯವರು ಸಾರ್ವಜನಿಕ ಭಾಷಣದಲ್ಲಿ ಪ್ರಜ್ವಲ್ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ನಿಂದಿಸಿದ್ದಾರೆ. ಹೀಗಾಗಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ರಾಹುಲ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.