NIMHANS ಸಂಸ್ಥೆಗೆ ಪ್ರತಿಷ್ಠಿತ WHO ನೆಲ್ಸನ್ ಮಂಡೇಲಾ ಪ್ರಶಸ್ತಿ
ವಿಶ್ವ ಆರೋಗ್ಯ ಸಂಸ್ಥೆ ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ನಿಮ್ಹಾನ್ಸ್ ಗೆ 2024 ರ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಬೆಂಗಳೂರು: ವಿಶ್ವ ಆರೋಗ್ಯ ಸಂಸ್ಥೆ ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ನಿಮ್ಹಾನ್ಸ್ ಗೆ 2024 ರ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ನಿಮ್ಹಾನ್ಸ್ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯ ಪ್ರಚಾರಕ್ಕಾಗಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು 2019 ರಲ್ಲಿ ಸ್ಥಾಪಿಸಿದೆ. ಈ ಪ್ರಶಸ್ತಿಯನ್ನು ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಾರ್ವಜನಿಕ ಆರೋಗ್ಯ ಮತ್ತು ವಿಶ್ವಾದ್ಯಂತ ಯೋಗಕ್ಷೇಮದ ಸುಧಾರಣೆಗೆ ಗಮನಾರ್ಹ ಕೊಡುಗೆ ನೀಡಿದ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಗೆ ನೀಡಲಾಗುತ್ತದೆ. ಅಂತೆಯೇ ಈ ಪ್ರಶಸ್ತಿಗೆ ನಿಮ್ಹಾನ್ಸ್ ಆಸ್ಪತ್ರೆಗೆ ಒಲಿದು ಬಂದಿದೆ. ನಿಮ್ಹಾನ್ಸ್ ನಿರ್ದೇಶಕಿ ಡಾ ಪ್ರತಿಮಾ ಮೂರ್ತಿ ಅವರು ಜಿನೀವಾದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಈ ಪ್ರಶಸ್ತಿಗೆ ಭಾಜನವಾದ ನಿಮ್ಹಾನ್ಸ್ ಅಭಿನಂದನೆಗಳನ್ನು ಸಲ್ಲಿಸಿದರು. ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ಕೂಡ ನಿಮ್ಹಾನ್ಸ್ ಅನ್ನು ಅಭಿನಂದಿಸಿದರು. ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಭಾರತದ ಪ್ರಯತ್ನಗಳು ಮತ್ತು ಪ್ರವರ್ತಕ ಕೆಲಸವನ್ನು ಗುರುತಿಸಿದ್ದಕ್ಕಾಗಿ ಅವರು ಸಂತಸ ವ್ಯಕ್ತಪಡಿಸಿದರು.
ಪ್ರಶಸ್ತಿಯ ಕುರಿತು ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಪ್ರತಿಕ್ರಿಯಿಸಿ, ನಮ್ಮ ಸಾಂಸ್ಥಿಕ ಪ್ರಯಾಣದ ಈ ಹಂತದಲ್ಲಿ ಆರೋಗ್ಯ ಪ್ರಚಾರಕ್ಕಾಗಿ ಪ್ರತಿಷ್ಠಿತ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ಸ್ವೀಕರಿಸಲು ನಾವು ಹೆಮ್ಮೆಪಡುತ್ತೇವೆ ಎಂದು ಖುಷಿ ಹಂಚಿಕೊಂಡರು. ಅಲ್ಲದೇ ಇದು ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವ ನಮ್ಮ ಧ್ಯೇಯವನ್ನು ಮುಂದುವರಿಸುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



