ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಜೆಡಿಎಸ್ ಶಾಸಕ ಎ.ಮಂಜು ವಿಚಾರಣೆ ನಡೆಸಿದ SIT
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧ ಅರಕಲಗೂಡು ಜೆಡಿಎಸ್ ಶಾಸಕ ಎ ಮಂಜು ಅವರನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಹಾಸನ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧ ಅರಕಲಗೂಡು ಜೆಡಿಎಸ್ ಶಾಸಕ ಎ ಮಂಜು ಅವರನ್ನು ತಮ್ಮಯ್ಯ ನೇತೃತ್ವದ ಎಸ್‌ಐಟಿ ಅಧಿಕಾರಿಗಳು ಇಂದು ಹಾಸನದ ಸಿಇಎನ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ.
ಎಸ್‌ಐಟಿ ವಿಚಾರಣೆ ವೇಳೆ ಅರಕಲಗೂಡು ಪಟ್ಟಣದ ಮದುವೆ ಮಂಟಪದಲ್ಲಿ ಎ ಮಂಜು ಅವರಿಗೆ ಪೆನ್ ಡ್ರೈವ್ ನೀಡಿದ್ದೇನೆ ಎಂದು ಬೇಲೂರು ತಾಲೂಕಿನ ನಲ್ಕೆ ಗ್ರಾಮದ ನವೀನ್ ಗೌಡ ಎಂಬುವರು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಎಸ್‌ಐಟಿ ಎ ಮಂಜು ಅವರನ್ನು ವಿಚಾರಣೆಗೆ ಕರೆದಿದ್ದರು. ಈ ವಿಚಾರವನ್ನು ನವೀನ್ ಗೌಡ ಕೂಡ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು.
ತಮ್ಮಯ್ಯ ಅವರು ಎ ಮಂಜು ಅವರನ್ನು ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಇದೇ ಪ್ರಕರಣದಲ್ಲಿ ನವೀನ್ ಗೌಡ ಮತ್ತು ಚೇತನ್ ಗೌಡ ಅವರನ್ನು ಎಸ್‌ಐಟಿ ವಿಚಾರಣೆ ನಡೆಸಿದ್ದು, ಎರಡು ದಿನಗಳ ಕಾಲ ವಶಕ್ಕೆ ಪಡೆದಿದೆ. ಎ ಮಂಜು ಅವರು ನವೀನ್ ಗೌಡ ಮಾಡಿದ್ದ ಆರೋಪವನ್ನು ತಳ್ಳಿಹಾಕಿದ್ದು ಈ ಬಗ್ಗೆ ಕಾನೂನು ಕ್ರಮ ಜರುಗಿಸುವುದಾಗಿ ನವೀನ ಗೌಡಗೆ ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



