ರಾಜ್ಯ

ಚಾಮರಾಜನಗರ: ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧ ಗೊತ್ತಾಗುತ್ತಿದ್ದಂತೆ ಅಣ್ಣನನ್ನೆ ಕೊಂದ ತಮ್ಮ!

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ‌ ಚೌಡಹಳ್ಳಿ ಗ್ರಾಮದಲ್ಲಿ ಅತ್ತಿಗೆ ಜೊತೆಗಿನ ತನ್ನ ಅಕ್ರಮ ಸಂಬಂಧ ಗೊತ್ತಾಗುತ್ತಿದ್ದಂತೆ ತನ್ನ ಸ್ವಂತ ಅಣ್ಣನನ್ನು ತಮ್ಮನೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಚಾಮರಾಜನಗರ: ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧ ಗೊತ್ತಾಗುತ್ತಿದ್ದಂತೆ ಅಣ್ಣನನ್ನೆ ಕೊಂದ ತಮ್ಮ!
ಸಂಗ್ರಹ ಚಿತ್ರ
Published On :

ಚಾಮರಾಜನಗರ: ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ‌ ಚೌಡಹಳ್ಳಿ ಗ್ರಾಮದಲ್ಲಿ ಅತ್ತಿಗೆ ಜೊತೆಗಿನ ತನ್ನ ಅಕ್ರಮ ಸಂಬಂಧ ಗೊತ್ತಾಗುತ್ತಿದ್ದಂತೆ ತನ್ನ ಸ್ವಂತ ಅಣ್ಣನನ್ನು ತಮ್ಮನೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಅತ್ತಿಗೆ ಜೊತೆಗಿನ ಲವ್ವಿಡವ್ವಿಗೆ ಅಡ್ಡಿಯಾಗಿದ್ದಾನೆಂದು ತನ್ನ ಅಣ್ಣ ಚೌಡಹಳ್ಳಿ ಗ್ರಾಮದ 45 ವರ್ಷದ ಪ್ರಸಾದ್ ಎಂಬಾತನನ್ನು 39 ವರ್ಷದ ಕುಮಾರ್ ಕೊಲೆ ಮಾಡಿದ್ದಾನೆ. ತನ್ನ ಹೆಂಡತಿ ಜೊತೆ ತನ್ನ ಸಹೋದರ ಕುಮಾರ್ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ವಿಚಾರ ತಿಳಿದ ಕೂಡಲೇ ಪ್ರಸಾದ್, ಕುಮಾರ್ ಜೊತೆ ಜಗಳವಾಡಿದ್ದಾನೆ.

ಅಣ್ಣ-ತಮ್ಮನ ನಡುವೆ ಗಲಾಟೆ ಜೋರಾಗುತ್ತಿದ್ದಂತೆ ಇಬ್ಬರು ಕೈ ಕೈ ಮಿಲಾಯಿಸಿದ್ದಾರೆ. ನಂತರ ಕುಮಾರ್ ಸಿಟ್ಟಿನಲ್ಲಿ ಪ್ರಸಾದ್ ಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಪ್ರಸಾದ್ ಮೃತಪಟ್ಟಿದ್ದಾರೆ. ಕೊಲೆ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ದೌಡಾಯಿಸಿದ್ದು ಆರೋಪಿ ಕುಮಾರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.