ಜೂನ್ 4ರ ನಂತರ ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ: ಬಿವೈ ವಿಜಯೇಂದ್ರ ಸ್ಪಷ್ಟನೆ
ಜೂ.4ರ ಲೋಕಸಭಾ ಚುನಾವಣೆ ಬಳಿಕ ಬಿಜೆಪಿ ನಾಯಕತ್ವದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಜೂ.4ರ ಲೋಕಸಭಾ ಚುನಾವಣೆ ಬಳಿಕ ಬಿಜೆಪಿ ನಾಯಕತ್ವದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸ್ಪಷ್ಟಪಡಿಸಿದ್ದಾರೆ.
ದಿ ನ್ಯೂ ಸಂಡೆ ಎಕ್ಸ್‌ಪ್ರೆಸ್‌ಗೆ ಜೊತೆಗೆ ಮಾತನಾಡಿದ ಅವರು,, ಜೂನ್ 4 ರ ನಂತರ ಪಕ್ಷದಲ್ಲಿ ದೊಡ್ಡ ಪ್ರಮಾಣದ ಬದಲಾವಣೆಗಳಾಗಲಿವೆ ಎಂಬುದು ವದಂತಿಯಷ್ಟೇ ಎಂದು ಹೇಳಿದರು.
ಆದರೆ, ಲೋಕಸಭೆ ಚುನಾವಣೆಯ ಪೂರ್ವದಲ್ಲಿ ಪಕ್ಷದಲ್ಲಿ ಹಲವೆಡೆ ಒಳಜಗಳ, ಮನಸ್ತಾಪಗಳಿದ್ದದ್ದು ನಿಜ ಎಂದು ಒಪ್ಪಿಕೊಂಡರು.
ಹೌದು, ಹಲೆವೆಡೆ ಆಂತರಿಕ ಕಿತ್ತಾಟಗಳು ಶುರುವಾಗಿದ್ದವು. ಆದರೆ ಇದು ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
ಟಿಕೆಟ್ ನಿರಾಕರಿಸಿದ್ದರಿಂದ ಕೆಲವು ನಾಯಕರು ಬಂಡಾಯವೆದ್ದಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಂಡಿದೆ. ಇದಕ್ಕೆ ರಾಜ್ಯ ನಾಯಕತ್ವವನ್ನು ಯಾರೂ ದೂಷಿಸಲು ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗದಂತಹ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಕಾಂಗ್ರೆಸ್‌ನ ಹಲವರು ಹೇಳಿಕೊಂಡಿದ್ದಾರೆಂಬ ಪ್ರಶ್ನೆಗೆ ಉತ್ತರಿಸಿ, ಈ ಎಲ್ಲಾ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. 25 ಸ್ಥಾನಗಳಲ್ಲೂ ಬಿಜೆಪಿಗೆ ಗೆಲುವು ಖಚಿತ. ಜೆಡಿಎಸ್ ಸ್ಥಾನಗಳ ಬಗ್ಗೆ ಮಾತನಾಡುವುದಿಲ್ಲ. ಆದರೆ, ನಾವು ಸ್ಪರ್ಧಿಸಿದ ಎಲ್ಲಾ 25 ಸ್ಥಾನಗಳಲ್ಲೂ ಗೆಲ್ಲುವು ನಿಶ್ಚಿತ ಎಂದು ಹೇಳಿದರು.
ದಾವಣಗೆರೆಯಲ್ಲಿ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸೊಸೆ, ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಗೆಲುವು ಖಚಿತ ಎಂಬ ಮಾತಿಗಳುಗಳಿಗೆ ಉತ್ತರಿಸಿ, ಬಂಡಾಯವೆದ್ದು ಸ್ಪರ್ಧಿಸದೇ ಇದ್ದಿದ್ದರೆ ಪರಿಸ್ಥಿತಿ ಬೇರೆ ಇರುತ್ತಿತ್ತು. ಆದರೆ, ಬಂಡಾಯವೆದ್ದು ದಾವಣಗೆರೆಯಿಂದ ಸ್ಪರ್ಧಿಸಿದ್ದಾರೆ. ಅವರು ಸುಮಾರು 40,000-50,000 ಮತಗಳನ್ನು ಪಡೆಯಬಹುದು. ಹಾಗಾಗಿ ದಾವಣಗೆರೆಯಲ್ಲೂ ನಮಗೆ ಗೆಲವು ನಿಶ್ಚಿತ ಎಂದರು.
ಚಾಮರಾಜನಗರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ನಾವೂ ಕೂಡ ಸಮೀಕ್ಷೆ ನಡೆಸಿ ಪ್ರತಿಕ್ರಿಯೆ ಪಡೆದಿದ್ದೇವೆ. ಜೂನ್ 4 ರವರೆಗೆ ಕಾಯೋಣ. ಆದರೆ. ಚಾಮರಾಜನಗರದಲ್ಲಿ ನಾವು ಉತ್ತಮವಾಗಿ ಕಾರ್ಯನಿರ್ವಹಿಸಬಹುದಿತ್ತು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



