ರಾಜ್ಯ

ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ..!

ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.

ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ..!
ಸಂಗ್ರಹ ಚಿತ್ರ
Published On :

ಉಡುಪಿ: ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.

ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂಬ ಆರೋಪಗಳು ಕೇಳಿ ಬಂದಿವೆ.

ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ.

ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್​ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆನ್ನಲಾಗಿದೆ.

ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ.

ಇನ್ನು ಮತ್ತೊಂದೆಡೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬಲ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಮಹಿಳಾ ಸಹೋದ್ಯೋಗಿ ಮೇಲೆ ವೈದ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪವಿದ್ದು, ಮಹಿಳಾ ಸಹೋದ್ಯೋಗಿ ನೀಡಿದ ದೂರಿನ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.