ಬೆಂಗಳೂರು ಸೆಂಟ್ರಲ್ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಗೆಲುವು
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಅಚ್ಚರಿ ರೀತಿಯಲ್ಲಿ ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಅಚ್ಚರಿ ರೀತಿಯಲ್ಲಿ ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಆರಂಭದಲ್ಲಿ ಮುನ್ನಡೆಯಲ್ಲಿದ್ದ ಪಿ. ಸಿ. ಮೋಹನ್ ನಂತರ ಸುತ್ತಿನಲ್ಲಿ ಹಿನ್ನೆಡೆ ಅನುಭವಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಗೆದ್ದೆ ಗೆಲ್ಲುತ್ತಾರೆ ಎನ್ನಲಾಗುತಿತ್ತು.
ಆದರೆ, ಅಂತಿಮ ಹಂತದಲ್ಲಿ ವಿಜಯಲಕ್ಷ್ಮಿ ಪಥ ಬದಲಾಯಿಸಿದ್ದು, ಮಹದೇವಪುರ, ಸಿ.ವಿ.ರಾಮನ್ ನಗರದಲ್ಲಿ ಪಿ.ಸಿ.ಮೋಹನ್ ಗೆ ಹೆಚ್ಚಿನ ಮತಗಳು ಸಿಕ್ಕಿದ್ದು 35 ರಿಂದ 40 ಸಾವಿರ ಲೀಡ್ ನಿಂದ ಗೆಲುವು ಸಾಧಿಸಿದ್ದಾರೆ.
ಒಂದೂವರೆ ದಶಕಗಳ ಇತಿಹಾಸ ಹೊಂದಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಕ್ಷೇತ್ರದಲ್ಲಿ ಆರಂಭದಿಂದಲೂ ಬಿಜೆಪಿಯೇ ಗೆಲುವು ಸಾಧಿಸುತ್ತಿದೆ. ಮಾತ್ರವಲ್ಲದೇ, ಒಬ್ಬರೇ ಸಂಸದರಾಗಿ ಮುಂದುವರೆದಿರುವುದು ವಿಶೇಷ.
2019 ರ ಲೋಕಸಭಾ ಚುನಾವಣೆಯಲ್ಲಿ ಪಿಸಿ ಮೋಹನ್ 70,968 ಮತಗಳ ಅಂತರದಿಂದ ಕಾಂಗ್ರೆಸ್ನ ರಿಜ್ವಾನ್ ಅರ್ಷದ್ ವಿರುದ್ಧ ಗೆಲುವು ಸಾಧಿಸಿದ್ದರು. ಸದ್ಯ ಈ ಬಾರಿ ಮೊದಲ ಬಾರಿಗೆ ಕಾಂಗ್ರೆಸ್ನಿಂದ ಮನ್ಸೂರ್ ಅಲಿ ಖಾನ್ ಸ್ಪರ್ಧಿಸಿದ್ದು ಪಿ.ಸಿ.ಮೋಹನ್ ಮತ್ತೊಮ್ಮೆ ಗೆದ್ದು 4ನೇ ಬಾರಿ ಸಂಸದರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



