ರಾಜ್ಯ

Election Results 2024 Live Updates: ಬಳ್ಳಾರಿಯಲ್ಲಿ ಶ್ರೀರಾಮುಲುಗೆ ಆಘಾತ, ಕಾಂಗ್ರೆಸ್‌ ಅಭ್ಯರ್ಥಿ E ತುಕಾರಂಗೆ ಗೆಲುವು

ತೀವ್ರ ಕುತೂಹಲ ಕೆರಳಿಸಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟಗೊಂಡಿದ್ದು, ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲುಗೆ ಭಾರಿ ಮುಖಭಂಗವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ E ತುಕಾರಂ ಭರ್ಜರಿ ಜಯ ಸಾಧಿಸಿದ್ದಾರೆ.

Election Results 2024 Live Updates: ಬಳ್ಳಾರಿಯಲ್ಲಿ ಶ್ರೀರಾಮುಲುಗೆ ಆಘಾತ, ಕಾಂಗ್ರೆಸ್‌ ಅಭ್ಯರ್ಥಿ E ತುಕಾರಂಗೆ ಗೆಲುವು
ಶ್ರೀರಾಮುಲು ಮತ್ತು ಇ ತುಕಾರಾಂ
Published On :

ಬಳ್ಳಾರಿ: ತೀವ್ರ ಕುತೂಹಲ ಕೆರಳಿಸಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟಗೊಂಡಿದ್ದು, ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲುಗೆ ಭಾರಿ ಮುಖಭಂಗವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ E ತುಕಾರಂ ಭರ್ಜರಿ ಜಯ ಸಾಧಿಸಿದ್ದಾರೆ.

ಬಳ್ಳಾರಿಯಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್‌ ಇ ತುಕಾರಂ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಶ್ರೀರಾಮುಲುಗೆ ಸೋಲಾಗಿದ್ದು, ಇ. ತುಕಾರಂ ಗೆಲುವು ಸಾಧಿಸಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ ತುಕಾರಾಂ ಒಟ್ಟು 5,93,839 ಮತಗಳನ್ನು ಪಡೆದಿದ್ದು, 98,294 ಮತಗಳ ಅಂತರದಲ್ಲಿ ಬಿಜೆಪಿಯ ಬಿ ಶ್ರೀರಾಮುಲು ವಿರುದ್ಧ ಜಯ ಗಳಿಸಿದ್ದಾರೆ. ಇಲ್ಲಿ ಶ್ರೀರಾಮುಲು ಒಟ್ಟು 4,95,545 ಮತಗಳನ್ನು ಪಡೆದಿದ್ದಾರೆ.

ಬಳ್ಳಾರಿಯ ಸಂಡೂರು ಕ್ಷೇತ್ರದ ಶಾಸಕರಾಗಿದ್ದ ಇ ತುಕಾರಂ ಮೂಲತಃ ಬಳ್ಳಾರಿಯವರು. ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ವಸ್ತುವಾರಿ ಸಚಿವರೂ ಆಗಿದ್ದರು. ಈವರೆಗೆ ಬಳ್ಳಾರಿ ಲೋಕ ಕ್ಷೇತ್ರದಲ್ಲಿ ನಡೆದ ಒಟ್ಟು 19 ಚುನಾವಣೆಗಳಲ್ಲಿ 15 ಬಾರಿ ಕಾಂಗ್ರೆಸ್‌ ಗೆದಿದ್ದರೆ, 4 ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಇದೀಗ ಮತ್ತೆ ಕಾಂಗ್ರೆಸ್‌ ಗೆಲುವು ಸಾಧಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.