ರಾಜ್ಯ

Breaking News: ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ?: ಪ್ರತಾಪ್ ಸಿಂಹ ಟ್ವೀಟ್!

ಕರ್ನಾಟಕ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 28 ಕ್ಷೇತ್ರಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ ಸುಧಾಕರ್ ಗೆದ್ದರೆ ತಾವು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ.

Breaking News: ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ?: ಪ್ರತಾಪ್ ಸಿಂಹ ಟ್ವೀಟ್!
ಶಾಸಕ ಪ್ರದೀಪ್ ಈಶ್ವರ್
Published On :

ಬೆಂಗಳೂರು: ಕರ್ನಾಟಕ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 28 ಕ್ಷೇತ್ರಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ ಸುಧಾಕರ್ ಗೆದ್ದರೆ ತಾವು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಪ್ರದೀಪ್ ಈಶ್ವರ್ ಮಾಧ್ಯಮಗಳ ಮುಂದೆ ಮಾತನಾಡಿದ್ದರು.

ಈ ಹಿಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಖಚಿತವಾಗಿ ಗೆಲ್ಲುತ್ತಾರೆ. ನಮ್ಮ ಅಭ್ಯರ್ಥಿಗಿಂತ ಡಾ. ಸುಧಾಕರ್ 1 ಮತ ಹೆಚ್ಚಿಗೆ ಪಡೆದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಘಂಟಾ ಘೋಷವಾಗಿ ಹೇಳಿದ್ದರು.

ಇದೀಗ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಅವರು 8,19,588 ಮತಗಳನ್ನು ಪಡೆದು 1,62,099 ಮತಗಳ ಅಂತರದಿಂದ ಬೃಹತ್ ಗೆಲುವು ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ 6,57,489 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ಮಾತನಾಡಿದ್ದ ವಿಡಿಯೋ ತುಣುಕನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ ನೀಡಲಿದ್ದಾರೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.