ಶಿವಮೊಗ್ಗದಲ್ಲಿ ನೈತಿಕ ಪೊಲೀಸ್‌ಗಿರಿ: ಮುಸ್ಲಿಂ ಯುವತಿಗೆ ಬೈಕ್‌ನಲ್ಲಿ ಲಿಫ್ಟ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ
ಮುಸ್ಲಿಂ ಸಮುದಾಯಕ್ಕೆ ಸೇರಿದ ತನ್ನ ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ನಗರದ ಇಲ್ಯಾಸ್‌ನಗರ ಬಳಿ ಭಾನುವಾರ ನಡೆದಿದೆ.

ಶಿವಮೊಗ್ಗ: ಮುಸ್ಲಿಂ ಸಮುದಾಯಕ್ಕೆ ಸೇರಿದ ತನ್ನ ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ನಗರದ ಇಲ್ಯಾಸ್‌ನಗರ ಬಳಿ ಭಾನುವಾರ ನಡೆದಿದೆ.
ಪೊಲೀಸರ ಪ್ರಕಾರ, ಶಿವಮೊಗ್ಗದ ಕುಂಬಾರಗುಂಡಿ ನಿವಾಸಿ ಎಸ್‌ಬಿ ನಂದನ್ ಹಲ್ಲೆಗೊಳಗಾದ ವ್ಯಕ್ತಿ.
ಈತ ನಗರದ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಮುಸ್ಲಿಂ ಯುವತಿ ಕೂಡ ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ಮುಸ್ಲಿಂ ಯುವಕರ ತಂಡ ಅವರನ್ನು ಅಡ್ಡಗಟ್ಟಿದ್ದಾರೆ.
ಮುಸ್ಲಿಂ ಯುವತಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ. ಇನ್ನೊಮ್ಮೆ ಯುವತಿಯ ಜೊತೆ ಕಂಡರೆ ಕೊಲೆ ಮಾಡುತ್ತೇವೆ ಎಂದು ಗ್ಯಾಂಗ್ ನಂದನ್‌ಗೆ ಬೆದರಿಕೆ ಹಾಕಿ ಹಲ್ಲೆ ನಡೆಸಿದೆ. ಸಂತ್ರಸ್ತನನ್ನು ನಗರದ ಮೆಕ್‌ಗನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



