ಹವಾಮಾನ ವೈಪರೀತ್ಯ: ಉತ್ತರಾಖಂಡದಲ್ಲಿ ಕರ್ನಾಟಕ ಮೂಲದ ನಾಲ್ವರು ಚಾರಣಿಗರು ಸಾವು
ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಉತ್ತರಾಖಂಡದ ಸಹಸ್ರತಾಲ್‌ನಲ್ಲಿ ಸಿಕ್ಕಿಬಿದ್ದಿರುವ ಇತರರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, 19 ಚಾರಣಿಗರ ಪೈಕಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹೇಳಿದರು.

ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಉತ್ತರಾಖಂಡದ ಸಹಸ್ರತಾಲ್‌ನಲ್ಲಿ ಸಿಕ್ಕಿಬಿದ್ದಿರುವ ಇತರರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, 19 ಚಾರಣಿಗರ ಪೈಕಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಗರ್ವಾಲ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ದುರಂತದಲ್ಲಿ ಸಾವಿಗೀಡಾದವರ ಗುರುತು ಪತ್ತೆಯಾಗಿಲ್ಲ ಎಂದು ಅವರು ಹೇಳಿದರು.
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಅನ್ನು ಸಹ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ ಎಂದು ರಶ್ಮಿ ಮಹೇಶ್ ಹೇಳಿದರು.
ಈ ಟ್ರೆಕ್ಕಿಂಗ್ ಅನ್ನು ಇಂಡಿಯನ್ ಮೌಂಟೇನಿಯರಿಂಗ್ ಫೌಂಡೇಶನ್ ಆಯೋಜಿಸಿತ್ತು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



