ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ, ಈ ಪ್ರಯಾಣಕ್ಕೆ ಧನ್ಯವಾದ: ಗೀತಾ ಸೋಲಿನ ಬಳಿಕ ಶಿವಣ್ಣ ಪ್ರತಿಕ್ರಿಯೆ
ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಸೋಲಿನ ನಂತರ ಮೊದಲ ಬಾರಿಗೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಸೋಲಿನ ನಂತರ ಮೊದಲ ಬಾರಿಗೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ.
ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ ನಿಮ್ಮೂಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತಾ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಶಿವಣ್ಣ ಪೋಸ್ಟ್ ಮಾಡಿದ್ದಾರೆ.
ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ @INCKarnataka ಕಾರ್ಯಕರ್ತರು ಹಾಗು ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ಅವರು 7,78,721 ಮತಗಳನ್ನು ಪಡೆದು ಜಯ ಸಾಧಿಸಿದರು. 2,43,715 ಮತಗಳ ಅಂತರದಲ್ಲಿ ಅವರು ಗೆಲುವು ಸಾಧಿಸಿದ್ದಾರೆ. ಗೀತಾ ಶಿವರಾಜ್‌ಕುಮಾರ್ ಅವರು 5,35,006 ಮತಗಳನ್ನು ಪಡೆದರು. ಈ ಬಾರಿ ಗೀತಾ ಗೆಲುವಿಗಾಗಿ ಸ್ಯಾಂಡಲ್ ವುಡ್ ನ ಅನೇಕ ನಟ ನಟಿಯರು ಪ್ರಚಾರ ಮಾಡಿದ್ದರು. ಆದರೆ, ಯಾವ ಪ್ರಚಾರವೂ ಅವರನ್ನು ಕೈ ಹಿಡಿಯಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



