ವಿಶ್ವ ಪರಿಸರ ದಿನ: ರಾಜಭವನ ಅಂಗಳದಲ್ಲಿ ಸಸಿ ನೆಟ್ಟ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್!
ಇಂದು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತಿದೆ. ಪರಿಸರವನ್ನು ಉಳಿಸಿ, ಬೆಳೆಸುವ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ.

ಬೆಂಗಳೂರು: ಇಂದು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತಿದೆ. ಪರಿಸರವನ್ನು ಉಳಿಸಿ, ಬೆಳೆಸುವ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಭೂಮಿ ಪುನಃಸ್ಥಾಪನೆ, ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ ಈ ವರ್ಷದ ಧ್ಯೇಯವಾಕ್ಯವಾಗಿದೆ.
1972ರಲ್ಲಿ ಜೂನ್ 5 ರಂದು ಸ್ವೀಡನ್‌ನ ಸ್ಟಾಕ್‌ಹೋಮ್‌ನಲ್ಲಿ ಮಾನವ ಪರಿಸರ ಸಂಬಂಧದ ಕುರಿತು ವಿಶ್ವಸಂಸ್ಥೆಯು ಸಮ್ಮೇಳನವೊಂದನ್ನು ನಡೆಸಿತ್ತು. ಈ ದಿನವನ್ನು ಗೌರವಿಸಿ 1973ರಲ್ಲಿ ಪ್ರಪಂಚದಾದ್ಯಂತದ ಮೊದಲ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಆ ದಿನವನ್ನು ವಿಶ್ವ ಪರಿಸರ ದಿನ ಎಂದು ಆಚರಿಸುತ್ತಾ ಬರಲಾಗಿದೆ.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ರಾಜಭವನದ ಆವರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಕುಟುಂಬದೊಂದಿಗೆ ಕ್ಯಾಸಿಯಾ ಫಿಸ್ಟುಲಾ ಸಸಿಯನ್ನು ನೆಟ್ಟರು. ಈ ಸಂದರ್ಭದಲ್ಲಿ ರಾಜ್ಯಪಾಲರು ಸಸಿಗಳನ್ನು ನೆಟ್ಟು ಪ್ರಕೃತಿಯನ್ನು ಪೋಷಿಸಿ, ಪರಿಸರ ಸಂರಕ್ಷಣೆಗೆ ತಮ್ಮ ಕೊಡುಗೆಯನ್ನು ನೀಡುವಂತೆ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



