ಪಕ್ಷ - ಸರ್ಕಾರದ ಘನತೆ ಉಳಿಸಲು ಸ್ವಯಂ ಪ್ರೇರಣೆಯಿಂದ ನಾಗೇಂದ್ರ ರಾಜೀನಾಮೆಗೆ ಮುಂದಾಗಿದ್ದಾರೆ: DCM
ಪಕ್ಷ ಹಾಗೂ ಸರ್ಕಾರ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರು: ಪಕ್ಷ ಹಾಗೂ ಸರ್ಕಾರ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು ಎಂದರು.
ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದಾಗ, ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದರು.
ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಕೇಳಿದಾಗ, “ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಉತ್ತಮ ಪ್ರದರ್ಶನ ನೀಡಿರುವುದಕ್ಕೆ ಸಂತೋಷವಾಗಿದೆ. ನಮ್ಮ ಮೈತ್ರಿಕೂಟ ಅಧಿಕಾರದ ಸನಿಹಕ್ಕೆ ಬಂದರೂ ಸರ್ಕಾರ ರಚನೆ ಪ್ರಯತ್ನದಿಂದ ದೂರವಿರಲು ನಿರ್ಧರಿಸಿದೆ. ಪ್ರತಿಪಕ್ಷಗಳು ಬಲಿಷ್ಠವಾಗಿರಬೇಕು ಎಂದು ದೇಶ ಅಭಿಪ್ರಾಯ ಪಟ್ಟಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ರಕ್ಷಣೆಗೆ ಹೊಸ ಭರವಸೆ ಸಿಕ್ಕಿದೆ. ಭವಿಷ್ಯದ ಬಗ್ಗೆ ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ” ಎಂದರು.
ಗ್ಯಾರಂಟಿ ಜಾರಿ ವಿಚಾರವಾಗಿ ಕೇಳಿದಾಗ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗುವುದು. ಕಾಂಗ್ರೆಸ್ ಪಕ್ಷ ಎಂದಿಗೂ ಇಟ್ಟ ಹೆಜ್ಜೆಯನ್ನು ಹಿಂದಕ್ಕೆ ಪಡೆಯುವುದಿಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವುದು” ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



