ರಾಜ್ಯ

ಬಿಜೆಪಿ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ಅವ್ಯವಹಾರ: ಗೂಳಿಹಟ್ಟಿ ಶೇಖರ್

ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ಅವ್ಯವಹಾರ: ಗೂಳಿಹಟ್ಟಿ ಶೇಖರ್
ಗೂಳಿಹಟ್ಟಿ ಶೇಖರ್
Published On :

ಚಿತ್ರದುರ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.

ಹಿಂದೆ ಸಮಾಜ ಕಲ್ಯಾಣ ಸಚಿವರಾಗಿದ್ದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ನೂರಾರು ಕೋಟಿ ರೂ. ಲಂಚ ಸಂದಾಯವಾಗಿದೆ ಎಂದು ವಾಯ್ಸ್ ಮೆಸೇಜ್ ಮೂಲಕ ಗೂಳಿಹಟ್ಟಿ ಶೇಖರ್ ಆರೋಪ ಮಾಡಿದ್ದಾರೆ.

13 ನಿಮಿಷಗಳ ವಾಯ್ಸ್ ಮೆಸೇಜ್ ಬಿಡುಗಡೆ ಮಾಡಿರುವ ಗೂಳಿಹಟ್ಟಿ ಶೇಖರ್, ಉಡುಪಿ-ಚಿಕ್ಕಮಗಳೂರು ನೂತನ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಸಚಿವರಾಗಿದ್ದಾಗ ಹಗರಣ ನಡೆದಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಬೋವಿ ನಿಗಮದ ಹಗರಣವನ್ನು ಸಿಐಡಿ ತನಿಖೆಗೆ ನೀಲಾಗಿದೆ. ಪ್ರಕರಣ ಸಂಬಂಧ ಇಬ್ಬರ ಕೊಲೆ ಆಗಿದೆ ಎಂದು ಗೂಳಿಹಟ್ಟಿ ಶೇಖರ್ ಆರೋಪ ಮಾಡಿದ್ದಾರೆ.

ಸಿಬಿಐ ತನಿಖೆ ಬೇಡ, ಹಾಲಿ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡಿಸಿ. ಕೋಟ ಶ್ರೀನಿವಾಸ್ ಪೂಜಾರಿಯಂಥ ಪ್ರಾಮಾಣಿಕರು ದೇಶದಲ್ಲಿಲ್ಲ. ಈಗ 50-60 ಕೋಟಿ ಆಸ್ತಿ ಎಲ್ಲಿಂದ ಬಂತು? ಎಸ್​​ಟಿ ನಿಗಮ, ಬೋವಿ ನಿಗಮ ಎಲ್ಲ ಹಗರಣಗಳ ಬಗ್ಗೆ ತನಿಖೆ ಮಾಡಿ. ಸಿದ್ದರಾಮಯ್ಯ ಸಿಎಂ ಆದ ಬಳಿಕ ತನಿಖೆ ಸ್ಥಗಿತ ಆಗಿದೆ. ಬಿಎಸ್ ಯಡಿಯೂರಪ್ಪ ಕೇಸ್ ತನಿಖೆ ಮಾಡದೆ ಯಾಕೆ ಮುಚ್ಚಿ ಹಾಕಿದ್ರಿ? ದೂರುದಾರ ಮಹಿಳೆ ಸಾವಿಗೀಡಾದ ಸುದ್ದಿ ಎಲ್ಲೆಡೆ ಬಂದಿದೆ. ಪ್ರಜ್ವಲ್ ಕೇಸ್ ಮಾತ್ರ ತನಿಖೆ ಮಾಡ್ತೀರಾ ಎಂದು ಗೂಳಿಹಟ್ಟಿ ಶೇಖರ್​​ ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.