ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ SIT ಕಸ್ಟಡಿ ಜೂನ್ 10 ರವರೆಗೆ ವಿಸ್ತರಣೆ
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಗುರುವಾರ ಕೋರ್ಟ್ ಜೂನ್ 10ರ ವರೆಗೆ ವಿಸ್ತರಿಸಿ ಆದೇಶಿಸಿದೆ.

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಗುರುವಾರ ಕೋರ್ಟ್ ಜೂನ್ 10ರ ವರೆಗೆ ವಿಸ್ತರಿಸಿ ಆದೇಶಿಸಿದೆ.
ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಆರೋಪಿಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಇನ್ನಷ್ಟು ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.
ಎಸ್ಐಟಿ ಪರ ವಕೀಲ ಅಶೋಕ್ ನಾಯಕ್ ಅವರು ಆರೋಪಿಯ ಕಸ್ಟಡಿ ವಿಸ್ತರಿಸುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ಎಸಿಎಂಎಂ 42ನೇ ನ್ಯಾಯಾಲಯದ ನಾಯಾಧೀಶ ಕೆ.ಎಂ. ಶಿವಕುಮಾರ್ ಅವರು ಪ್ರಜ್ವಲ್ ರೇವಣ್ಣ ಎಸ್ ಐಟಿ ಕಸ್ಟಡಿ ಅವಧಿಯನ್ನು ಜೂನ್ 10 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದರು.
ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆ ಹಾಗೂ ಸಿಐಡಿ ಠಾಣೆಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣಗಳ ತನಿಖೆಗೆ ಎಸ್ಐಟಿ ರಚನೆ ಮಾಡಿ ಆದೇಶ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



