ಚಿಕ್ಕಮಗಳೂರಿನಲ್ಲಿ 34 ಕೋತಿಗಳ ಮಾರಣಹೋಮ: ಬಾಳೆ ಹಣ್ಣಿನಲ್ಲಿ ಪ್ರಜ್ಞೆ ತಪ್ಪುವ ಔಷಧವಿಟ್ಟು, ತಲೆಗೆ ಬಡಿದು ದಾರುಣ ಹತ್ಯೆ!
ಬಾಳೆ ಹಣ್ಣಿನಲ್ಲಿ ಪ್ರಜ್ಷೆತಪ್ಪುವ ಔಷಧವಿಟ್ಟಿರುವ ಕಿಡಿಗೇರಿಗಳು, ಮಂಗಗಳ ಪ್ರಜ್ಞೆತಪ್ಪಿಸಿ ಬಳಿಕ ಅವುಗಳ ತಲೆಗೆ ಹೊಡೆದು ಸಾಯಿಸಿದ್ದಾರೆ ಎನ್ನಲಾಗಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನ ಎನ್‌ಆರ್ ಪುರದ ದ್ಯಾವನದಲ್ಲಿ ಮಂಗಗಳ ಮಾರಣಹೋಮ ನಡೆದಿದೆ. 34 ಮಂಗಳನ್ನು ಅಮಾನುಷವಾಗಿ ಕೊಂದು ರಸ್ತೆ ಬದಿಯಲ್ಲಿ ಎಸೆದಿರುವ ಘಟನೆ ವರದಿಯಾಗಿದೆ. ಈ ಹೀನ ಕೃತ್ಯಕ್ಕೆ ಪ್ರಾಣಿಪ್ರಿಯರು ಖಂಡನೆ ವ್ಯಕ್ತಪಡಿಸುತ್ತಿದ್ದು, ಕೃತ್ಯ ಎಸಗಿದವರನ್ನು ಪತ್ತೆಹಚ್ಚಿ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.
ಬಾಳೆ ಹಣ್ಣಿನಲ್ಲಿ ಪ್ರಜ್ಷೆತಪ್ಪುವ ಔಷಧವಿಟ್ಟಿರುವ ಕಿಡಿಗೇರಿಗಳು, ಮಂಗಗಳ ಪ್ರಜ್ಞೆತಪ್ಪಿಸಿ ಬಳಿಕ ಅವುಗಳ ತಲೆಗೆ ಹೊಡೆದು ಸಾಯಿಸಿದ್ದಾರೆ ಎನ್ನಲಾಗಿದೆ.
ಹೀಗೆ 34 ಮಂಗಗಳನ್ನು ಕೊಂದಿರುವ ದುಷ್ಕರ್ಮಿಗಳು ಮಂಗಗಳ ಕಳೇಬರಗಳನ್ನು ರಸ್ತೆ ಬದಿ ಎಸೆದು ಹೋಗಿದ್ದಾರೆ. ಮಂಗಗಳು ಸಾವನಪ್ಪಿರುವುದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
4 ಮರಿಗಳು ಸೇರಿ ಒಟ್ಟು 34 ಮಂಗಗಳನ್ನು ಕಿಡಿಗೇಡಿಗಳು ಹತ್ಯೆ ಮಾಡಿದ್ದಾರೆ. ಆದರೆ, ಯಾವ ಕಾರಣಕ್ಕಾಗಿ ಮಂಗಗಳನ್ನು ಸಾಯಿಸಲಾಗಿದೆ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ಕಾಡು ಪ್ರಾಣಿಗಳನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆಗೆ ಜಿಲ್ಲಾದ್ಯಂತ ಪ್ರಾಣಿ ಪ್ರಿಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದ್ದಾರೆ. ಮಂಗಗಳನ್ನು ಕೊಂದಿರುವ ಆರೋಪಿಗಳ ಪತ್ತೆಗೆ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಮಲೆನಾಡಿನ ಜನ ತಮ್ಮ ಬೆಳೆಗಳಾದ ಕಾಫಿ ಮತ್ತು ಬಾಳೆಯನ್ನು ರಕ್ಷಿಸಲು ಮಂಗ ಹಿಡಿಯುವವರನ್ನು ನೇಮಿಸಿಕೊಳ್ಳುತ್ತಿರುತ್ತಾರೆ. ಆದರೆ, ಈ ಘಟನೆ ಉದ್ದೇಶಪೂರ್ವಕವಾಗಿ ನಡೆಸಿರುವ ಕ್ರೌರ್ಯವಾಗಿದೆ ಎಂದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ಕೆಲವು ಕಿಡಿಗೇಡಿಗಳ ಉದ್ದೇಶಪೂರ್ವಕವಾಗಿ ನಡೆಸಿರುವ ಕೃತ್ಯವೆಂದು ತೋರುತ್ತದೆ. ಮಂಗಗಳನ್ನು ಕೊಂದಿರುವ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


