ಎಸ್ಪಿ, ಐಜಿಪಿ ಕಚೇರಿ ಜಾಗ ಮಾರಾಟಕ್ಕೆ ಯತ್ನ, ಆರು ಮಂದಿ ಬಂಧನ
ನಕಲಿ ದಾಖಲೆ ಸೃಷ್ಟಿಸಿ ನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಕಚೇರಿ ಹಾಗೂ ಕೇಂದ್ರ ವಲಯ ಐಜಿಪಿ ಕಚೇರಿ ಜಾಗವನ್ನು ಮಾರಾಟಕ್ಕೆ ಯತ್ನಿಸಿದ ಆರು ಮಂದಿಯನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಕಚೇರಿ ಹಾಗೂ ಕೇಂದ್ರ ವಲಯ ಐಜಿಪಿ ಕಚೇರಿ ಜಾಗವನ್ನು ಮಾರಾಟಕ್ಕೆ ಯತ್ನಿಸಿದ ಆರು ಮಂದಿಯನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ.
ಐದು ಎಕರೆ ಜಾಗದ ಇಂದಿನ ಮಾರುಕಟ್ಟೆ ಮೌಲ್ಯ ಸುಮಾರು ರೂ. 200 ಕೋಟಿ ಆಗಿದೆ. ಪೊಲೀಸ್ ಇಲಾಖೆಯ ಕಚೇರಿ ಇರುವ ಕಟ್ಟಡದ ಹೆಸರು ಓಂ ಮಹಲ್. ಬಂಧಿತರನ್ನು ವಿದ್ಯಾರಣ್ಯಪುರದ ಎಂಡಿ ಹನೀಫ್, ವಿಜಯನಗರದ ರಾಜಶೇಖರ್, ಉಳ್ಳಾಲದ ರಾಮಸಂದ್ರ ಮುಖ್ಯರಸ್ತೆಯ ಮೊಹಮ್ಮದ್ ನದೀಮ್, ಸಂಜಯನಗರದ ಮೋಹನ್ ಶೆಟ್ಟಿ ಮತ್ತು ಜಹೀರ್ ಅಹಮದ್ ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ 1ರಿಂದ 1.30ರ ನಡುವೆ ಈ ಘಟನೆ ನಡೆದಿದೆ. ಆರೋಪಿಗಳು ಎಸ್ಪಿ ಕಚೇರಿ ಆವರಣವನ್ನು ಅತಿಕ್ರಮ ಪ್ರವೇಶಿಸಿದ್ದು, ತಮ್ಮ ಮೊಬೈಲ್ ನಿಂದ ಕಚೇರಿಯ ಕಟ್ಟಡ ಹಾಗೂ ಆವರಣವನ್ನು ಚಿತ್ರೀಕರಿಸಿ, ಪೋಟೋ ಸೆರೆ ಹಿಡಿಯಲು ಮುಂದಾಗಿದ್ದಾರೆ. ಅದನ್ನು ಗಮನಿಸಿದ ಎಸ್ಟೇಟ್ ಆಫೀಸರ್ ಸಂತೋಷ್ ಗೌಡ, ಏಕೆ ಕಚೇರಿ ಕಟ್ಟಡ ಚಿತ್ರೀಕರಿಸುತ್ತಿರುವಿರಿ ಎಂದು ಪ್ರಶ್ನಿಸಿದ್ದಾರೆ. ಆಗ ಸ್ವತ್ತಿನ ಮಾಲೀಕರಾದ ಗಣಪತಿ ಮತ್ತು ಜಹೀರ್ ಎಂಬುವರು ನಮಗೆ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ಮಾಡಿಕೊಟ್ಟಿದ್ದು, ಮಾರಾಟ ಮಾಡುವ ಹಕ್ಕಿದೆ ಎಂದು ಆರೋಪಿಗಳು ಹೇಳಿದ್ದಾರೆ.
ಈ ವಿಷಯವನ್ನು ಮೇಲಾಧಿಕಾರಿಗಳಿಗೆ ತಿಳಿಸಿದ ಇನ್ಸ್‌ಪೆಕ್ಟರ್ ಹೈಗ್ರೌಂಡ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಫ್ಲಾಟ್ ನೇಪಾಳದ ರಾಜಮನೆತನಕ್ಕೆ ಸೇರಿತ್ತು ಎಂದು ಹೇಳಲಾಗುತ್ತದೆ. ಆದರೆ, ಮಾಲೀಕತ್ವದ ವಿವರಗಳು ಸ್ಪಷ್ಟವಾಗಿಲ್ಲ. ಪೊಲೀಸ್ ಇಲಾಖೆಯ ಕಚೇರಿಗಳು 1962 ರಿಂದ ಕಾರ್ಯನಿರ್ವಹಿಸುತ್ತಿವೆ."ಆಸ್ತಿ ಮಾಲೀಕತ್ವದ ಬಗ್ಗೆ ಗೊಂದಲವಿದೆ. ನಿವೇಶನ ನೇಪಾಳಿ ರಾಜನಿಗೆ ಸೇರಿದ್ದು ಎಂದು ಹೇಳಲಾಗಿದೆ. ರಾಜ್ಯ ಸರ್ಕಾರದಿಂದ ಆಸ್ತಿಯನ್ನು ನೋಂದಾಯಿಸಲು ಹಲವಾರು ಪತ್ರ ವ್ಯವಹಾರಗಳು ನಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಲದಂಡಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



