ರಾಜ್ಯ

ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ವಂಚಿಸಲು ಯತ್ನ: ದೂರು ದಾಖಲು

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ವಂಚಿಸಲು ವ್ಯಕ್ತಿಯೊಬ್ಬ ಯತ್ನಿಸಿದ್ದು, ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ವಂಚಿಸಲು ಯತ್ನ: ದೂರು ದಾಖಲು
ಡಿಕೆ ಶಿವಕುಮಾರ್ — PTI
Published On :

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ವಂಚಿಸಲು ವ್ಯಕ್ತಿಯೊಬ್ಬ ಯತ್ನಿಸಿದ್ದು, ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಡಿಸಿಎಂ ಅವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಅವರು ಅನಾಮಧೇಯ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಮೇ 20 ರಿಂದ ಜೂನ್ 5 ರ ನಡುವೆ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಕರೆ ಮಾಡಿ ವ್ಯಕ್ತಿ, ತನ್ನನ್ನು ಡಿಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವಂಚಿಸಲು ಯತ್ನಿಸಿದ್ದಾನೆಂದು ದೂರಿನಲ್ಲಿ ಹೇಳಿದ್ದಾರೆ.

ದೂರು ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯ ಮೊಬೈಲ್ ಸಂಖ್ಯೆಯನ್ನು ಟ್ರ್ಯಾಕ್ ಮಾಡುತ್ತಿದ್ದು, ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ವ್ಯಕ್ತಿಗೆ ಯಾರಾದರೂ ಹಣವನ್ನು ಕಳುಹಿಸಿದ್ದಾರೆಯೇ ಎಂಬುದು ಇನ್ನಬೂ ಖಚಿತವಾಗಿಲ್ಲ. ಈ ಸಂಬಂಧ ಯಾವುದೇ ದೂರುಗಳೂ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.