ರಾಜ್ಯ

ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿದು ರಾಜ್ಯಗಳ ಹಿತಾಸಕ್ತಿ ಗೌರವಿಸುತ್ತೀರೆಂದು ಭಾವಿಸಿದ್ದೇನೆ: ಮೋದಿಗೆ ಸಿದ್ದರಾಮಯ್ಯ ಅಭಿನಂದನೆ

ಸತತ 3ನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿದು ರಾಜ್ಯಗಳ ಹಿತಾಸಕ್ತಿ ಗೌರವಿಸುತ್ತೀರೆಂದು ಭಾವಿಸಿದ್ದೇನೆ: ಮೋದಿಗೆ ಸಿದ್ದರಾಮಯ್ಯ ಅಭಿನಂದನೆ
ಸಿಎಂ ಸಿದ್ದರಾಮಯ್ಯ ಮತ್ತು ಪ್ರಧಾನಿ ಮೋದಿ
Published On :

ಬೆಂಗಳೂರು: ಸತತ 3ನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.