ಆಸ್ತಿ ವಿವಾದ?: ಮೈಸೂರಿನ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿ ಬರ್ಬರ ಕೊಲೆ
ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮೈಸೂರು: ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಮೈಸೂರಿನ ಸಿದ್ದಾರ್ಥನಗರದಲ್ಲಿ 90 ವರ್ಷದ ಶಿವಾನಂದ ಸ್ವಾಮೀಜಿಯನ್ನು ಸ್ವಾಮೀಜಿ ಆಪ್ತ ಸಹಾಯಕ 60 ವರ್ಷದ ರವಿ ಎಂಬಾತನೇ ಹತ್ಯೆ ಮಾಡಿದ್ದು ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನಾ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನ್ನದಾನೇಶ್ವರ ಮಠವು ಸುಮಾರು 9 ಎಕರೆ ವಿಸ್ತೀರ್ಣದಲ್ಲಿದೆ. ಮೈಸೂರು ರಾಜರು ದಾನವಾಗಿ ನೀಡಿದ್ದ ಈ ಮಠದ ಜಾಗದ ವಿಚಾರವಾಗಿ ಹಲವು ವಿವಾದಗಳು ಇವೆ.
ಕುಡಿದ ಮತ್ತಿನಲ್ಲಿ ಶಿವಾನಂದ ಸ್ವಾಮೀಜಿ ಅವರನ್ನು ರವಿ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಹುಲ್ಲು ಕತ್ತರಿಸುವ ಆಯುಧದಲ್ಲಿ ಸ್ವಾಮೀಜಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



