ವರ್ಗಾವಣೆ ವೇಳೆ ಕಾರ್ಯಕ್ಷಮತೆಯಷ್ಟೇ ಮಾನದಂಡ, ಬೇರೆ ಯಾವ ಪ್ರಭಾವಕ್ಕೂ ಮಣಿಯಲ್ಲ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ
ತೆರಿಗೆ ಸಂಗ್ರಹದಲ್ಲಿ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ಪರಿಗಣಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೇರೆ ಯಾವುದೇ ಪ್ರಭಾವಕ್ಕೂ ಮಣೆ ಹಾಕುವುದಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ತೆರಿಗೆ ಸಂಗ್ರಹದಲ್ಲಿ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ಪರಿಗಣಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೇರೆ ಯಾವುದೇ ಪ್ರಭಾವಕ್ಕೂ ಮಣೆ ಹಾಕುವುದಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.
ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವಾಣಿಜ್ಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು. ವಿಳಂಬ ಮಾಡಿದರೆ ಶಿಸ್ತುಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಲ್ಲದೆ ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತೇನೆ. ಆ ವೇಳೆಗೆ ಗುರಿ ತಲುಪಿರಬೇಕು.
ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಸಿ.ಶಿಖಾ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



