HSRP ನಂಬರ್ ಪ್ಲೇಟ್ ಅಳವಡಿಕೆ; ಗಡುವು ವಿಸ್ತರಣೆಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ
2019ರ ಏಪ್ರಿಲ್ 1ಕ್ಕೂ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಅಳವಡಿಸುವ ಗಡುವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ವಿಸ್ತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ಬೆಂಗಳೂರು: 2019ರ ಏಪ್ರಿಲ್ 1ಕ್ಕೂ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಅಳವಡಿಸುವ ಗಡುವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ವಿಸ್ತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.
ಎಚ್‌ಎಸ್‌ಆರ್‌ಪಿ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳ ವಿಚಾರಣೆಯ ಸಂದರ್ಭದಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಮ್ ಹುಯಿಲ್‌ಗೋಳ್ ಅವರು ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್ ಅವರ ವಿಭಾಗೀಯ ಪೀಠದ ಮುಂದೆ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಿಸುವ ಕುರಿತು ಮನವಿ ಸಲ್ಲಿಸಿದರು.
ಹಿಂದಿನ ಆದೇಶದಿಂದಾಗಿ ರಾಜ್ಯ ಸರ್ಕಾರವು ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ವಿಸ್ತರಿಸುವ ಸ್ಥಿತಿಯಲ್ಲಿಲ್ಲ. ಜೂನ್ 12 ರವರೆಗೆ ಯಾವುದೇ ಪೂರ್ವಾಪೇಕ್ಷಿತ ಕ್ರಮಗಳನ್ನು ತೆಗೆದುಕೊಳ್ಳದಂತೆ ನಿರ್ಬಂಧಿಸುತ್ತದೆ. ಆದ್ದರಿಂದ, ನ್ಯಾಯಾಲಯವು ಹಿಂದಿನ ಆದೇಶವನ್ನು ಮಾರ್ಪಡಿಸಬೇಕು ಎಂದು ಹುಯಿಲಗೋಳ್ ತಿಳಿಸಿದರು.
ಸರ್ಕಾರದ ಮನವಿಯನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯ ಮೇ 21 ರಂದು ನೀಡಲಾದ ಮಧ್ಯಂತರ ಆದೇಶವನ್ನು ಮಾರ್ಪಡಿಸುವ ಮೂಲಕ ಗಡುವನ್ನು ವಿಸ್ತರಿಸುವ ನಿರ್ಧಾರವನ್ನು ತೆಗೆದುಕೊಳ್ಳಲು ಸರ್ಕಾರಕ್ಕೆ ಸ್ವಾತಂತ್ರ್ಯವನ್ನು ನೀಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



