ನಟ ದರ್ಶನ್ ಪ್ರಕರಣ: ಮರಣೋತ್ತರ ಪರೀಕ್ಷೆ ವರದಿ ತಿರುಚಲು ಪ್ರಯತ್ನ 'ಹೃದಯಾಘಾತ' ಎಂದು ತೋರಿಸಲು ವೈದ್ಯರಿಗೆ ರೂ.1 ಕೋಟಿ ಆಫರ್!
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಗ್ಯಾಂಗ್ ನ್ನು ಬಂಧಿಸಿದಾಗಿನಿಂದ ಬೆಚ್ಚಿಬೀಳಿಸುವ ಸಂಗತಿಗಳು ಹೊರಬೀಳುತ್ತಿವೆ. ಆರೋಪಿಗಳು ನೀಡಿದ ಚಿತ್ರಹಿಂಸೆಯಿಂದ ಉಂಟಾದ ಆಘಾತ ಮತ್ತು ರಕ್ತಸ್ರಾವದಿಂದ ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಗ್ಯಾಂಗ್ ನ್ನು ಬಂಧಿಸಿದಾಗಿನಿಂದ ಬೆಚ್ಚಿಬೀಳಿಸುವ ಸಂಗತಿಗಳು ಹೊರಬೀಳುತ್ತಿವೆ. ಆರೋಪಿಗಳು ನೀಡಿದ ಚಿತ್ರಹಿಂಸೆಯಿಂದ ಉಂಟಾದ ಆಘಾತ ಮತ್ತು ರಕ್ತಸ್ರಾವದಿಂದ ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ.
ಆದರೆ, ದರ್ಶನ್ ಮೇಲಿನ ಕೊಲೆ ಆರೋಪವನ್ನು ಕೈಬಿಡಲು ಆರೋಪಿಗಳು ಮರಣೋತ್ತರ ಪರೀಕ್ಷೆಯ ವರದಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ತೋರಿಸಲು ಮರಣೋತ್ತರ ಪರೀಕ್ಷೆ ನಡೆಸಿದ ಅಧಿಕಾರಿಗಳಿಗೆ 1 ಕೋಟಿ ರೂ. ಆಮಿಷವೊಡಿರುವುದಾಗಿ ತಿಳಿದುಬಂದಿದೆ. ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ದರ್ಶನ್, ಅವರ ಗೆಳತಿ ಪವಿತ್ರಾ ಗೌಡ ಮತ್ತು ಇತರ 16 ಮಂದಿಯನ್ನು ಬಂಧಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಪವಿತ್ರಾ ಗೌಡ ಅವರಿಗೆ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಿದ್ದ ರೇಣುಕಾಸ್ವಾಮಿಯನ್ನು ಅಪಹರಿಸಿ, ಬೆಂಗಳೂರಿಗೆ ಕರೆತಂದು, ಶೆಡ್‌ನಲ್ಲಿ ಇರಿಸಿ, ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದೀಗ ಮರಣೋತ್ತರ ಪರೀಕ್ಷೆ ವರದಿಯಲ್ಲಿ ರೇಣುಕಾಸ್ವಾಮಿ ಸಾವಿಗೂ ಮುನ್ನ ಕ್ರೂರವಾಗಿ ಚಿತ್ರಹಿಂಸೆ ನೀಡಿರುವುದು ದೃಢಪಟ್ಟಿದೆ. ಆತನ ದೇಹದಲ್ಲಿ ನಾಲ್ಕು ಮುರಿತಗಳು ಸೇರಿದಂತೆ 15 ಗಾಯದ ಗುರುತುಗಳಿವೆ ಎಂದು ಅದು ಹೇಳಿದೆ.
ಶೆಡ್‌ನಲ್ಲಿದ್ದ ಮಿನಿ ಟ್ರಕ್‌ಗೆ ರೇಣುಕಾಸ್ವಾಮಿಯ ತಲೆಯನ್ನು ಹೊಡೆಯಲಾಗಿದೆ. ದೇಹದ ತಲೆ, ಹೊಟ್ಟೆ, ಎದೆ ಮತ್ತು ಇತರ ಭಾಗಗಳಲ್ಲಿ ಗಾಯದ ಗುರುತುಗಳಿವೆ ಎಂದು ವರದಿಯಲ್ಲಿ ಹೇಳಲಾಗಿದೆ. ಬಂಧಿತ ಆರೋಪಿಗಳಲ್ಲಿ ಒಬ್ಬರು, ಪೊಲೀಸ್ ಅಪ್ರೋವರ್ ಆಗಲು ಒಪ್ಪಿಕೊಂಡಿದ್ದು, ದರ್ಶನ್ ರೇಣುಕಾಸ್ವಾಮಿಯ ಮರ್ಮಾಂಗಕ್ಕೆ ಬಲದಿಂದ ಒದ್ದು, ಆತನ ತಲೆಯನ್ನು ಮಿನಿ ಟ್ರಕ್‌ಗೆ ಗುದ್ದಿಸಿರುವುದಾಗಿ ಮೂಲಗಳು ಹೇಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



