SSLC ಪರೀಕ್ಷೆ-2 ಇಂದು ಆರಂಭ: ತೀವ್ರ ಕಣ್ಗಾವಲು
2024ರ ಎಸ್ಎಸ್ಎಲ್ಸಿ ಪರೀಕ್ಷೆ-2 ಜೂನ್ 22ರವರೆಗೆ ನಡೆಯಲಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 2,23,308 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ಇಂದು ಶುಕ್ರವಾರ ಜೂನ್ 14ರಿಂದ ಎಸ್ಎಸ್ಎಲ್ಸಿ ಪರೀಕ್ಷೆ-2 ಆರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುತ್ತಿರುವ ಪರೀಕ್ಷೆ ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 (1) ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆಯಾ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
2024ರ ಎಸ್ಎಸ್ಎಲ್ಸಿ ಪರೀಕ್ಷೆ-2 ಜೂನ್ 22ರವರೆಗೆ ನಡೆಯಲಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 2,23,308 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 1,44,160 ಬಾಲಕರು ಮತ್ತು 79,148 ಬಾಲಕಿಯರಿದ್ದಾರೆ. ಒಟ್ಟು ನೋಂದಣಿಯಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ.
ರಾಜ್ಯದ 724 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಜಿಲ್ಲಾ ಮತ್ತು ತಾಲ್ಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜಿಲ್ಲಾಧಿಕಾರಿಗಳಿಂದ ನಿಯೋಜಿತ ಇತರೆ ಇಲಾಖೆಗಳ ಜಾಗೃತ ದಳಗಳು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ. ಪ್ರತೀ ಕೇಂದ್ರದಲ್ಲಿಯೂ ಸಿಸಿಟಿವಿಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುತ್ತದೆ ಎಂದು ಮಂಡಳಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


