ಕಸದಿಂದ ವಿದ್ಯುತ್ ಉತ್ಪಾದನೆ ಘಟಕ: ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬಿಡದಿಯಲ್ಲಿ ನಿರ್ಮಾಣವಾಗುತ್ತಿರುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಗುರುವಾರ ಭೇಟಿ ನೀಡಿದ್ದ ಮುಖ್ಯ ಆಯುಕ್ತರು, ಪರಿಶೀಲನೆ ನಡೆಸಿದರು. ಘಟಕದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಬೆಂಗಳೂರು: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಸಿಎಲ್) ಬಿಡದಿಯಲ್ಲಿ ಸ್ಥಾಪಿಸುತ್ತಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕದ ಪ್ರಾಯೋಗಿಕ ಚಾಲನೆಗೆ ಶೀಘ್ರವೆ ಸಿದ್ಧತೆ ನಡೆಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಬಿಡದಿಯಲ್ಲಿ ನಿರ್ಮಾಣವಾಗುತ್ತಿರುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಗುರುವಾರ ಭೇಟಿ ನೀಡಿದ್ದ ಮುಖ್ಯ ಆಯುಕ್ತರು, ಪರಿಶೀಲನೆ ನಡೆಸಿದರು. ಘಟಕದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು. ನಗರದಲ್ಲಿನ ಅತಿಯಾದ ಕಸದ ಸಮಸ್ಯೆಯನ್ನು ಪರಿಹರಿಸುವ ಗುರಿಯನ್ನು ಘಟಕ ಹೊಂದಿದೆ.
ಈ ಘಟಕವನ್ನು 10 ಎಕರೆಯಲ್ಲಿ ಸ್ಥಾಪಿಸಲಾಗಿದ್ದು, ಒಟ್ಟು 260 ಕೋಟಿ ರು. ವೆಚ್ಚವಾಗುತ್ತಿದೆ. ಪ್ರತಿನಿತ್ಯ 11.5 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವಿದೆ. ಪಾಲಿಕೆಯ ಸಂಸ್ಕರಣಾ ಘಟಕಗಳು, ಒಣ ತ್ಯಾಜ್ಯ ಸಂಗ್ರಹಣಾ ಘಟಕಗಳಲ್ಲಿ ಸಂಗ್ರಹವಾಗುವ ಆರ್‌ಡಿಎಫ್ ಅನ್ನು ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ರವಾನಿಸಲಾಗುತ್ತದೆ ಎಂದು ಹೇಳಿದರು. ಬೊಮ್ಮನಹಳ್ಳಿ ವಲಯ ಗೊಲ್ಲಹಳ್ಳಿ ವ್ಯಾಪ್ತಿಯಲ್ಲಿ ಸರ್ವೆ ನಂ.39ರಲ್ಲಿ ಲೋಕೋಪಯೋಗಿ ಇಲಾಖೆ ಒಡೆತನದ ಸುಮಾರು 170 ಎಕರೆ ಜಾಗವಿದೆ. ಅಲ್ಲಿ ಸಮಗ್ರ ಘನತ್ಯಾಜ್ಯ ನಿರ್ವಹಣೆಯ ವ್ಯವಸ್ಥೆಯನ್ನು ಸ್ಥಾಪಿಸಲು ಸ್ಥಳ ಪರಿಶೀಲನೆ ನಡೆಸಿದರು. ತ್ಯಾಜ್ಯದಿಂದ ವಿದ್ಯುತ್ ಸ್ಥಾವರದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



