ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ, ಮಗು ಸೇರಿ ಮೂವರ ದುರ್ಮರಣ; ಐವರಿಗೆ ಗಂಭೀರ ಗಾಯ
ನ್ಯಾಷನಲ್ ಹೈವೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಎರಡು ವರ್ಷದ ಮದು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿತ್ರದುರ್ಗ: ನ್ಯಾಷನಲ್ ಹೈವೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಎರಡು ವರ್ಷದ ಮದು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರಿನ ತಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ(30), ಹರ್ಷಿತಾ(28), ಮೋಹನ್ (2) ಮೃತ ದುರ್ದೈವಿಗಳು. ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿನಲ್ಲಿದ್ದವರು ಒಂದೇ ಕುಟುಂಬಕ್ಕೆ ಸೇರಿದವರು ಇರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಶನಿವಾರವಾಗಿದ್ದ ಕಾರಣ ಮುಂಜಾನೆ ತಮ್ಮ ಪ್ರಯಾಣ ಆರಂಭಿಸಿರಬಹುದು ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುವ ವೇಳೆ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



