ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಹಿಂಪಡೆಯುವಂತೆ ಆಗ್ರಹ, ಜೂನ್ 17 ರಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಬಿಜೆಪಿ ಜೂನ್ 17 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಬಿಜೆಪಿ ಜೂನ್ 17 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ಮೊದಲನೆಯದಾಗಿ, ರಾಜ್ಯದ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಗ್ಯಾರಂಟಿಗಳ ಕಾರಣದಿಂದಾಗಿ ಅವರು ಸರ್ಕಾರವನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.
“ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 3 ರೂ. ಮತ್ತು ಡೀಸೆಲ್ ಬೆಲೆಯನ್ನು ರೂ. 3.50 ರಷ್ಟು ಹೆಚ್ಚಿಸಲು ನಿರ್ಧಾರ ಕೈಗೊಂಡಿದೆ. ಇದನ್ನು ಹಿಂಪಡೆಯಬೇಕು ಎಂಬುದು ಬಿಜೆಪಿಯ ಒತ್ತಾಯವಾಗಿದೆ. ಈ ನಿರ್ಧಾರದ ಬಗ್ಗೆ ಪಕ್ಷ ಸುಮ್ಮನಿರುವುದಿಲ್ಲ. ಸೋಮವಾರ ನಾವು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ ಮತ್ತು ಬೆಲೆ ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.
ರಾಷ್ಟ್ರ ಮತ್ತು ರಾಜ್ಯದಲ್ಲಿ ಹೀನಾಯ ಸೋಲಿನ ನಂತರ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸೇಡು ತೀರಿಸಿಕೊಂಡಿದ್ದು, ರಾಜ್ಯದ ಜನರ ಮೇಲೆ ತಮ್ಮ ಸಿಟ್ಟನ್ನು ಹೊರಹಾಕುತ್ತಿದ್ದಾರೆ. ನೋಂದಣಿ ಶುಲ್ಕ ಕೂಡಾ ಹೆಚ್ಚಿಸಿದ್ದಾರೆ.ಇದರ ಬಗ್ಗೆ ವಿಧಾನಸೌಧ ಹಾಗೂ ಹೊರಗಡೆ ಚರ್ಚೆ ನಡೆಸಿದ್ದೇವೆ. ವಿದ್ಯುತ್ ದರ ಕೂಡಾ ಹೆಚ್ಚಳ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಸಾಧ್ಯವಾಗದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದೆ. ಈ ಮೂಲಕ ರಾಜ್ಯ ಜನತೆಯನ್ನು ಶಿಕ್ಷಿಸುತ್ತಿದೆ. ಒಂದು ಕಡೆ ಲೋಕಸಭಾ ಚುನಾವಣೆಯ ಸೋಲಿನ ಹತಾಶೆ ಮತ್ತೊಂದೆಡೆ ರಾಜ್ಯದ ಆರ್ಥಿಕತೆ ನಾಶವಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಹಠಮಾರಿಯಾಗಿದೆ. ಆರ್ಥಿಕತೆ ಸದೃಢವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಕ್ರಮವು ರಾಜ್ಯದ ಪರಿಸ್ಥಿತಿ ಹದಗೆಟ್ಟಿದೆ ಎಂದು ತೋರಿಸುತ್ತದೆ. ಸರ್ಕಾರಕ್ಕೆ ಸಂಬಳ ನೀಡಲು ಸಾಧ್ಯವಾಗುತ್ತಿಲ್ಲ ಮತ್ತು ಇಂಧನ ಬೆಲೆಯನ್ನು ಹೆಚ್ಚಿಸಿದೆ ಎಂದು ಅವರು ಟೀಕಿಸಿದರು.
“ರಾಜ್ಯದಲ್ಲಿ ಬರಗಾಲವಿದೆ ಮತ್ತು ಈ ಬಿಕ್ಕಟ್ಟಿನ ಅವಧಿಯಲ್ಲಿ ಇಂಧನ ಬೆಲೆಗಳನ್ನು ಹೆಚ್ಚಿಸುವ ನಿರ್ಧಾರವು ಅಕ್ಷಮ್ಯ ಅಪರಾಧವಾಗಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ತಮ್ಮ ಅಹಂಕಾರವನ್ನು ಬದಿಗಿಟ್ಟು ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



