ರಾಜ್ಯ

ಪೋಕ್ಸೋ ಪ್ರಕರಣ: ಜೂನ್ 17 ರಂದು ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ - ಮಾಜಿ ಸಿಎಂ ಯಡಿಯೂರಪ್ಪ

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 17 ರಂದು ಸಿಐಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಪೋಕ್ಸೋ ಪ್ರಕರಣ: ಜೂನ್ 17 ರಂದು ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ - ಮಾಜಿ ಸಿಎಂ ಯಡಿಯೂರಪ್ಪ
ಮಾಜಿ ಸಿಎಂ ಯಡಿಯೂರಪ್ಪ — online desk
Published On :

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 17 ರಂದು ಸಿಐಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರಕ್ಕೆ ಆಗಮಿಸಿದ ಮಾಜಿ ಸಿಎಂ, ತಮ್ಮ ವಿರುದ್ಧ ಷಡ್ಯಂತ್ರ ನಡೆಸುತ್ತಿರುವವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಸಿಐಡಿಗೆ ಸೂಚಿಸಿದೆ. ಅಲ್ಲದೆ

ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಮುಂದೆ ಜೂನ್ 17 ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಸೂಚಿಸಿದೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, "ನಾನು ಪೂರ್ವ ನಿಗದಿತ ಕಾರ್ಯಕ್ರಮಕ್ಕಾಗಿ ದೆಹಲಿಗೆ ಹೋಗಿದ್ದೆ. ಜೂನ್ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ಲಿಖಿತವಾಗಿ ಮೊದಲೇ ತಿಳಿಸಿದ್ದೆ. ಸಿಐಡಿಗೆ ಬಂಧಿಸದಂತೆ ಹೈಕೋರ್ಟ್ ಆದೇಶಿಸಿದೆ. ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಲು ಯತ್ನಿಸಿದ್ದಾರೆ. ನಾನು ಯಾರನ್ನೂ ದೂಷಿಸಲು ಬಯಸುವುದಿಲ್ಲ. ಎಲ್ಲರಿಗೂ ಸತ್ಯ ತಿಳಿದಿದೆ. ಪಿತೂರಿ ನಡೆಸುತ್ತಿರುವವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಈ ವರ್ಷ ಮಾರ್ಚ್ 14 ರಂದು ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ(ಪೋಕ್ಸೋ) ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ದಾಖಲಾಗಿದೆ. ಈ ಪ್ರಕರಣ ಸಂಬಂಧ ಗುರುವಾರ ಕೋರ್ಟ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.