ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಬೇಕಲ್ವಾ? ಇಂಧನ ದರ ಏರಿಕೆ ಬಗ್ಗೆ MB ಪಾಟೀಲ್ ಸಮರ್ಥನೆ
ಆದಾಯ ಕಡಿಮೆ ಆಗ್ತಿದೆ. ಅಭಿವೃದ್ಧಿ, ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ ಅದಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ವಿಜಯಪುರ: ಆದಾಯ ಕಡಿಮೆ ಆಗ್ತಿದೆ. ಅಭಿವೃದ್ಧಿ, ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ ಅದಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗಾರರಿಗೆ ಈ ಕುರಿತು ಪ್ರತಿಕ್ರಿಯಿಸಿದ ಅವರು, ಬೇರೆ ರಾಜ್ಯಗಳನ್ನು ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಇದೆ. ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆಯಿದೆ ಯಾರ ಮೇಲೂ ಅನಾವಶ್ಯಕವಾಗಿ ಹೊರೆ ಹಾಕುತ್ತಿಲ್ಲ ಎಂದರು. ಮೋದಿಯವರು ಬಂದ ಮೇಲೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ ಅದನ್ನ ಯಾಕೆ ನೀವು ಕೇಳೋದಿಲ್ಲ. ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಾಗ 60 ರೂಪಾಯಿ ಪೆಟ್ರೋಲ್ ಇತ್ತು ಈಗ 105 ರೂಪಾಯಿ. ಉಳಿದ ರಾಜ್ಯಗಳನ್ನು ಹೋಲಿಕೆ ಮಾಡಿ ನೋಡಿ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ ಎಂದರು.
ನೆರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಪೆಟ್ರೋಲ್, ಡೀಸೆಲ್ ದರ ಕಡಿಮೆಯಿದೆ. ತಮಿಳುನಾಡು ಹಾಗೂ ಇತರ ರಾಜ್ಯಗಳಲ್ಲಿ 5 ರಿಂದ 10 ರೂಪಾಯಿ ಹೆಚ್ಚಿಗೆ ದರ ಇದೆ. ಇತರ ರಾಜ್ಯಗಳಿಗಿಂತ ಪೆಟ್ರೋಲ್ ಡೀಸೆಲ್ ದರ ಕಡಿಮೆ ಮಾಡಿ ಬೆಲೆ ಏರಿಕೆ ಮಾಡಲಾಗಿದೆ. ಸರ್ಕಾರಕ್ಕೆ ಆದಾಯ ಕಡಿಮೆಯಾಗುತ್ತಿದೆ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲ.ಹೀಗಾಗಿ ಅನವಶ್ಯಕವಾಗಿ ಹೆಚ್ಚಿಗೆ ಬೆಲೆ ಏರಿಕೆ ಮಾಡಲಾಗಿದೆ ಎಂದರು.
ಇತರ ರಾಜ್ಯಗಳ ಬೆಲೆ ತುಲನೆ ಮಾಡಿ ಏರಿಕೆ ಮಾಡಲಾಗಿದೆ ಎಂದ ಸಚಿವರು, ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿದರೂ ಅವುಗಳ ಬೆಲೆ ಉಳಿದ ರಾಜ್ಯಗಳಿಗಿಂತ ನಮ್ಮಲ್ಲಿ ಕಡಿಮೆ ಇದೆ. ನಾವು ತೈಲ ಬೆಲೆ ಏರಿಕೆ ಮಾಡಿದರೂ ಅದು ರಾಜ್ಯದ ಅಭಿವೃದ್ಧಿ, ಜನರಿಗಾಗಿಯೇ ಮಾಡುವುದಲ್ಲವೇ? ಗ್ಯಾರಂಟಿ ಯೋಜನೆಗಳನ್ನು ಎಲ್ಲರಿಗೂ ಕೊಡುತ್ತಿದ್ದೇವೆ. ನಾವು ಫೈನಾನ್ಶಿಯಲ್ ಮೊಬಲೈಸೇಷನ್ ಮಾಡಲೇಬೇಕು. ಅದ್ಯಾಗೂ ಪೆಟ್ರೋಲ್ ಡೀಸೆಲ್ ದರಗಳು ಬೇರೆ ರಾಜ್ಯಗಳಿಗಿಂತ ನಮ್ಮ ಹೆಚ್ಚಿಗೆ ಇದ್ದರೆ ಹೇಳಿ ಎಂದು ಪ್ರಶ್ನಿಸಿದರು.
ತೈಲ ಬೆಲೆಗಳನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿದ್ದಾಗ ಗ್ಯಾಸ್ ಬೆಲೆ 440ರೂ ಇತ್ತು, ಪೆಟ್ರೋಲ್ ಲೀಟರ್ ಗೆ 64 ರೂಪಾಯಿ ಇತ್ತು. ಬಿಜೆಪಿ ಸರ್ಕಾರದಲ್ಲಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಬಿಜೆಪಿ ಸರ್ಕಾರದಲ್ಲಿ ಪೆಟ್ರೋಲ್ ಬೆಲೆ ಅದು 1100 ರೂಪಾಯಿಗೆ ಹೋಗಿದೆ. ಅಷ್ಟಾದರೂ ಬೆಲೆ ಏರಿಕೆ ಕುರಿತು ನೀವು ಮೋದಿಯವರನ್ನ ಕೇಳಲಿಲ್ಲ. ಮೋದಿ ಹಾಗೂ ಕೇಂದ್ರ ಸರ್ಕಾರಕ್ಕೆ ಅನ್ವಯಿಸುವುದಿಲ್ಲವಾ? ಎಂದು ಪ್ರಶ್ನಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



