ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಅಪಹರಣಕ್ಕೆ ದರ್ಶನ್ ಗ್ಯಾಂಗ್ ಬಳಸಿದ್ದ ಕಾರನ್ನು ವಶಪಡಿಸಿಕೊಂಡ ಪೊಲೀಸರು

ನಟ ದರ್ಶನ್ ತೂಗುದೀಪ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಪ್ರಮುಖ ಆರೋಪಿಗಳಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ತಂಡವು ಭಾನುವಾರ ಸಂತ್ರಸ್ತನ ಅಪಹರಣಕ್ಕೆ ಬಳಸಲಾಗಿದ್ದ ಕಾರನ್ನು ವಶಪಡಿಸಿಕೊಂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಅಪಹರಣಕ್ಕೆ ದರ್ಶನ್ ಗ್ಯಾಂಗ್ ಬಳಸಿದ್ದ ಕಾರನ್ನು ವಶಪಡಿಸಿಕೊಂಡ ಪೊಲೀಸರು
ರೇಣುಕಾಸ್ವಾಮಿ- ದರ್ಶನ್
Published On :

ಚಿತ್ರದುರ್ಗ: ನಟ ದರ್ಶನ್ ತೂಗುದೀಪ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಪ್ರಮುಖ ಆರೋಪಿಗಳಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ತಂಡವು ಭಾನುವಾರ ಸಂತ್ರಸ್ತನ ಅಪಹರಣಕ್ಕೆ ಬಳಸಲಾಗಿದ್ದ ಕಾರನ್ನು ವಶಪಡಿಸಿಕೊಂಡಿದೆ.

ಆರೋಪಿಗಳಲ್ಲಿ ಒಬ್ಬನಾದ ರವಿ ಎಂಬಾತ ಚಿತ್ರದುರ್ಗ ಜಿಲ್ಲೆಯ ಅಯ್ಯನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಕಾರನ್ನು ನಿಲ್ಲಿಸಿದ್ದ. ವಾಹನವನ್ನು ವಶಪಡಿಸಿಕೊಳ್ಳುವಾಗ ವಿಧಿವಿಜ್ಞಾನ ತಜ್ಞರು ಹಾಜರಿದ್ದರು.

ಪೊಲೀಸರು ರವಿ ಕುಟುಂಬದವರನ್ನು ವಿಚಾರಣೆಗೊಳಪಡಿಸಿ ಕಾರಿನಲ್ಲಿದ್ದ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಪವಿತ್ರಾ ಸೇರಿ 16ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.