ರಾಜ್ಯ

ಇತಿಹಾಸದಲ್ಲಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ ಘಟನೆ ನಾನು ನೋಡಿಲ್ಲ: HDK

ಇತಿಹಾಸದಲ್ಲಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ ಘಟನೆ ಎಂದೂ ನಾನು ನೋಡಿಲ್ಲ. ಈ ಸರ್ಕಾರಕ್ಕೆ ಗೌರವ ಇದ್ದರೆ ಸರಿಪಡಿಸಿಕೊಳ್ಳಲಿ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

ಇತಿಹಾಸದಲ್ಲಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ  ಘಟನೆ ನಾನು ನೋಡಿಲ್ಲ: HDK
ಎಚ್.ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಇತಿಹಾಸದಲ್ಲಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ ಘಟನೆ ಎಂದೂ ನಾನು ನೋಡಿಲ್ಲ. ಈ ಸರ್ಕಾರಕ್ಕೆ ಗೌರವ ಇದ್ದರೆ ಸರಿಪಡಿಸಿಕೊಳ್ಳಲಿ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರ ನಟ ದರ್ಶನ್ ಕೇಸ್ ನಲ್ಲಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾಕಷ್ಟು ಟೀಕೆ ಟಿಪ್ಪಣಿಗಳು ನಡೆಯುತ್ತಿದ್ದು,ಈ ಸಂಬಂಧ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ನಾನು ಕೇಂದ್ರ ಸಚಿವನಾಗಿರುವುದನ್ನು ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರಕ್ಕೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ನನ್ನ ವಿರುದ್ಧ ಒಳಸಂಚು ನಡೆಸುತ್ತಿದೆ ಎಂದು ನೇರ ಆರೋಪ ಮಾಡಿದರು.

ದೇವೆಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಿದ್ದು ಆಯಿತು. ಈಗ ಯಡಿಯೂರಪ್ಪ ಅವರನ್ನು ಮುಗಿಸಲು ಹೊರಟಿದ್ದಾರೆ. ಅದಾದ ಮೇಲೆ ನನ್ನನ್ನು ಗುರಿ ಮಾಡಿದ್ದಾರೆ ಎಂದು ದೂರಿದರು.

ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದೆ. ನನಗೆ ಈ ಸರ್ಕಾರದ ನಾಲ್ಕು ತಿಂಗಳ ನಡುವಳಿಕೆ ಮೇಲೆ ರಾಜ್ಯವೇ ಅನುಮಾನ ಪಡುವಂತೆ ಕಾಣುತ್ತಿದೆ. ಈ ಸರ್ಕಾರದಲ್ಲಿ ಕಾನೂನು ಪಂಡಿತರು ಬಹಳ ಜನ ಇದ್ದಾರೆ.

ಅವರಿಗೆ ಹೇಳಿ, ಕುಮಾರಸ್ವಾಮಿಯದ್ದು ಏನಾದರೂ ಸಿಗುತ್ತದೆಯಾ ನೋಡಿ ಎಂದು ಕೆದಕಲು ಹೇಳಿದ್ದಾರೆ. ಅಂತಹ ಸಿಎಂ ಸಿದ್ದರಾಮಯ್ಯ ಅವರು ಈಗ ನಾಲ್ಕು ತಿಂಗಳ ನಂತರ ಯಡಿಯೂರಪ್ಪ ಅವರ ಕೇಸ್ ಕೆದಕ್ಕಿದ್ದಾರೆ. ನನ್ನ ಮುಗಿಸಲು ಪ್ರಯತ್ನ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.