ರಾಜ್ಯ

ಇಂಧನ ಬೆಲೆ ಏರಿಕೆಗೂ, ಲೋಕಸಭೆ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ: ಸಿದ್ದರಾಮಯ್ಯ

ಕರ್ನಾಟಕದಲ್ಲಿ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಧನೆಗೆ ಪ್ರತೀಕಾರವಾಗಿ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿದೆ ಎನ್ನುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಅವರ ಆರೋಪವನ್ನು ಸಿದ್ದರಾಮಯ್ಯ ತಳ್ಳಿಹಾಕಿದರು.

ಇಂಧನ ಬೆಲೆ ಏರಿಕೆಗೂ, ಲೋಕಸಭೆ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ: ಸಿದ್ದರಾಮಯ್ಯ
ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದಲ್ಲಿ ಭಾನುವಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
Published On :

ವಿಜಯಪುರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೂ, ಲೋಕಸಭೆ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದಲ್ಲಿ ಭಾನುವಾರ ಮಾಧವಾನಂದ ಸ್ವಾಮಿಗಳ ನೂತನ ದೇಗುಲದ ಉದ್ಘಾಟನೆ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಧನೆಗೆ ಪ್ರತೀಕಾರವಾಗಿ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿದೆ ಎನ್ನುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಅವರ ಆರೋಪವನ್ನು ತಳ್ಳಿಹಾಕಿದರು.

'ಪ್ರಜಾಪ್ರಭುತ್ವದಲ್ಲಿ ಗೆಲುವು ಮತ್ತು ಸೋಲು ಸಾಮಾನ್ಯ'. ಕರ್ನಾಟಕದಲ್ಲಿ ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಫಲಿತಾಂಶವನ್ನು ಸಾಧಿಸಿಲ್ಲ. ಆದರೆ, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿಯು 25 ರಿಂದ 19 ಸ್ಥಾನಕ್ಕೆ ಕುಸಿದಿದೆ. ಕಾಂಗ್ರೆಸ್ ಒಂದು ಸ್ಥಾನದಿಂದ ಒಂಬತ್ತು ಸ್ಥಾನಗಳನ್ನು ಪಡೆದುಕೊಂಡಿದೆ' ಎಂದು ಇಂಧನ ಬೆಲೆ ಏರಿಕೆ ಮೇಲಿನ ಚುನಾವಣಾ ಪರಿಣಾಮಗಳ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯು ಯಾವುದೇ ಚುನಾವಣಾ ಫಲಿತಾಂಶದಿಂದ ಪ್ರಭಾವಿತವಾಗಿಲ್ಲ. ಆದರೆ, ಇತರ ರಾಜ್ಯಗಳಿಗೆ ಹೋಲಿಸಿದರೆ ದರಗಳನ್ನು ಸಮತೋಲನಗೊಳಿಸುವ ಗುರಿಯನ್ನು ಹೊಂದಿದೆ. ವಿಪಕ್ಷದ ಆರೋಪಗಳು ಕೇವಲ ರಾಜಕೀಯ ಪ್ರೇರಿತವಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಖಾತರಿ ಯೋಜನೆಗಳನ್ನು ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಲಾಗಿದೆಯೇ ಹೊರತು ಚುನಾವಣಾ ತಂತ್ರಗಳಾಗಿ ಅಲ್ಲ. ಅನುದಾನ ಸ್ಥಗಿತದ ಯಾವುದೇ ವದಂತಿಗಳನ್ನು ತಳ್ಳಿಹಾಕಿದ ಅವರು, ಸಾರ್ವಜನಿಕ ಒಳಿತಿಗಾಗಿ ಅವುಗಳ ಮುಂದುವರಿಕೆಯನ್ನು ಪ್ರತಿಪಾದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.