ರಾಜ್ಯ

ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಚರ್ಚಿಸಿ ತೀರ್ಮಾನ; ಕೇಸಿನಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ: ಡಾ ಜಿ ಪರಮೇಶ್ವರ್

ನಟ ದರ್ಶನ್ ತೂಗುದೀಪ ಸಹಚರರಿಂದ ಹತ್ಯೆಯಾಗಿದ್ದಾರೆ ಎಂದು ಹೇಳಲಾಗುತ್ತಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಚರ್ಚಿಸಿ ತೀರ್ಮಾನ; ಕೇಸಿನಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ: ಡಾ ಜಿ ಪರಮೇಶ್ವರ್
ಪವಿತ್ರಾ ಗೌಡ, ದರ್ಶನ್, ಮತ್ತು ಕೊಲೆಯಾದ ರೇಣುಕಾಸ್ವಾಮಿ(ಸಂಗ್ರಹ ಚಿತ್ರ)
Published On :

ಬೆಂಗಳೂರು: ನಟ ದರ್ಶನ್ ತೂಗುದೀಪ ಸಹಚರರಿಂದ ಹತ್ಯೆಯಾಗಿದ್ದಾರೆ ಎಂದು ಹೇಳಲಾಗುತ್ತಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಲು ನಿನ್ನೆ ತೆರಳಬೇಕಿತ್ತು. ಆದರೆ, ಬಕ್ರೀದ್ ಹಬ್ಬ ಇದ್ದರಿಂದ ಹೋಗಲು ಸಾಧ್ಯವಾಗಿಲ್ಲ. ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟು ಧೈರ್ಯ ಹೇಳಿ ಬರುತ್ತೇನೆ ಎಂದರು.

ರೇಣುಕಾಸ್ವಾಮಿ ಕುಟುಂಬದ ಸದಸ್ಯರಿಗೆ ಆರ್ಥಿಕ ನೆರವು ನೀಡುವ ಬಗ್ಗೆ, ತನಿಖೆ ನಡೆದ ಬಳಿಕ ಆರ್ಥಿಕ ನೆರವು ಬಗ್ಗೆ ಚರ್ಚೆ ಮಾಡುತ್ತೇವೆ. ಸರ್ಕಾರದಿಂದ ನೆರವು ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದರು.

ಸಂಬಂಧಪಟ್ಟವರನ್ನು ತನಿಖೆ ಮಾಡಲಾಗುವುದು: ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣಗೆ ನೋಟಿಸ್‌ ನೀಡಿರುವ ಬಗ್ಗೆ, ಸಿನಿಮಾ ನಟರು ಆಗಿರೋದ್ರಿಂದ ಕಲಾವಿದರು ಸಂಪರ್ಕದಲ್ಲಿರುವುದು ಸಹಜ. ಸಾಕ್ಷ್ಯಾಧಾರಗಳ ಮೇಲೆ ತನಿಖೆ ಮುಂದುವರೆಯುತ್ತದೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ತನಿಖೆ ಮಾಡಲಾಗುವುದು ಎಂದರು. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ದರ್ಶನ್ ಸೇರಿದಂತೆ 19 ಜನರು ಬಂಧನದಲ್ಲಿದ್ದಾರೆ.

ಪೆಟ್ರೋಲ್ ದರ ಏರಿಕೆ ಪ್ರತಿಭಟನೆ ಎದುರಿಸುತ್ತೇವೆ: ಪಿಎಸ್ ಐ ನೇಮಕಾತಿ ಅಂತಿಮ ಹಂತದಲ್ಲಿದೆ. ಟೆಕ್ಷಿಕಲ್ ಪ್ರಶ್ನೆಗಳನ್ನ ತೆಗೆದಿದ್ದಾರೆ. ಈ ವಾರ ಅಥವಾ ಮುಂದಿನ ವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ಬಗ್ಗೆ, ಪ್ರತಿಭಟನೆ ಮಾಡೋದು ಅವರ ಹಕ್ಕು. ಬಿಜೆಪಿಯವರು ಪ್ರತಿಯೊಂದರಲ್ಲೂ ರಾಜಕಾರಣ ಮಾಡ್ತಾರೆ. 14 ಬಾರಿ ಪೆಟ್ರೋಲ್ ಬೆಲೆ ಏರಿಕೆ ಮಾಡಿದ್ದಾರೆ. ಕಚ್ಚಾತೈಲ ಬ್ಯಾರಲ್ ಕಡಿಮೆ ಇದ್ದರೂ ಜಾಸ್ತಿ ಮಾಡಿದರು. ಅದನ್ನು ಬಿಜೆಪಿಯವರು ನೆನಪಿಟ್ಟುಕೊಳ್ಳಲಿ. ಅವರ ಪ್ರತಿಭಟನೆ ಮಾಡಲಿ ನಾವು ಎದುರಿಸುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.