ರಾಜ್ಯ

ಕುವೈತ್ ಅಗ್ನಿ ದುರಂತ; ಕಲಬುರಗಿ ಮೂಲದ ಮೃತನ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ನೆರವು

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯ್ ಕುಮಾರ್ ಪ್ರಸನ್ನ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಮಂಗಳವಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಪ್ರಸನ್ನ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸಾರಸಾಂಬಾ ಗ್ರಾಮದವರು. ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ (ಸಿಎಂಆರ್‌ಎಫ್) 5 ಲಕ್ಷ ರೂ. ಪರಿಹಾರ ನೀಡಲಾಗಿದೆ.

ಕುವೈತ್ ಅಗ್ನಿ ದುರಂತ; ಕಲಬುರಗಿ ಮೂಲದ ಮೃತನ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ನೆರವು
ಸಿದ್ದರಾಮಯ್ಯ
Published On :

ಬೆಂಗಳೂರು: ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯ್ ಕುಮಾರ್ ಪ್ರಸನ್ನ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಮಂಗಳವಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಪ್ರಸನ್ನ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸಾರಸಾಂಬಾ ಗ್ರಾಮದವರು. ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ (ಸಿಎಂಆರ್‌ಎಫ್) 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಪ್ರಸನ್ನ ಅವರು ಕುವೈತ್‌ನಲ್ಲಿ ಎಂಟು ವರ್ಷಗಳಿಂದ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

ರಾಜ್ಯ ಸರ್ಕಾರದ ಪತ್ರಿಕಾ ಪ್ರಕಟಣೆಯ ಪ್ರಕಾರ, ಪ್ರಸನ್ನ ಅವರು ಒಡಹುಟ್ಟಿದವರು ಸೇರಿದಂತೆ ಎಂಟು ಮಂದಿ ಅವಲಂಬಿತರನ್ನು ಹೊಂದಿದ್ದಾರೆ. ಕರ್ನಾಟಕ ಎನ್‌ಆರ್‌ಐ ಫೋರಂನ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ಮನವಿ ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರಕ್ಕೆ ಅನುಮೋದನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.