'ಪ್ರಗತಿಪಥ' ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟ ಸಮ್ಮತಿ; 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ: ಪ್ರಿಯಾಂಕ್ ಖರ್ಗೆ
ʼಪ್ರಗತಿಪಥʼ ಯೋಜನೆಯಡಿ ರಾಜ್ಯದ 7, 110 ಕಿ.ಮೀ ಉದ್ದದ ರಸ್ತೆಗಳನ್ನು 5,190 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಇಂದು ನಡೆದ ಸಚಿವ ಸಂಪಟದ ಸಭೆಯಲ್ಲಿ ಅನುಮೋದನೆ ದೊರೆತಿದೆ.

ಬೆಂಗಳೂರು: ರಾಜ್ಯದ ಗ್ರಾಮೀಣ ರಸ್ತೆಗಳನ್ನು ಸುಸ್ಥಿತಿಗೆ ತರುವ ಸಲುವಾಗಿ ಆಯವ್ಯದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಂತೆ ರಾಜ್ಯ ಸರ್ಕಾರ ವಿನೂತನವಾಗಿ ಜಾರಿಗೊಳಿಸುತ್ತಿರುವ ʼಪ್ರಗತಿಪಥʼ ಯೋಜನೆಯಡಿ ರಾಜ್ಯದ 7, 110 ಕಿ.ಮೀ ಉದ್ದದ ರಸ್ತೆಗಳನ್ನು 5,190 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಇಂದು ನಡೆದ ಸಚಿವ ಸಂಪಟದ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ʼಪ್ರಗತಿಪಥʼ ಐದು ವರ್ಷಗಳ ವಾರ್ಷಿಕ ನಿರ್ವಹಣಾ ಯೋಜನೆಯಾಗಿದ್ದು, ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಮೂಲಕ ಆಯಾ ವಿಧಾನಸಭಾ ಕ್ಷೇತ್ರಗಳ ಆದ್ಯತೆಯ ಅನುಗುಣವಾಗಿ ಕೆ.ಟಿ.ಪಿ.ಪಿ ಕಾಯಿದೆ ಅನ್ವಯ ಪಾರದರ್ಶಕವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದೂ ಸಚಿವರು ಹೇಳಿದ್ದಾರೆ.
ಗ್ರಾಮೀಣ ರಸ್ತೆಗಳು ಗ್ರಾಮೀಣ ಪ್ರದೇಶಗಳ ಜೀವನಾಡಿಗಳಾಗಿ ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಮಾರುಕಟ್ಟೆಗಳು ಮುಂತಾದ ಅಗತ್ಯ ಸೇವೆಗಳಿಗೆ ಅವಶ್ಯ ಇರುತ್ತದೆ; ರೈತರ ಮತ್ತು ಗ್ರಾಮೀಣ ನಿವಾಸಿಗಳ ಜೀವನದ ಗುಣಮಟ್ಟವನ್ನು ಸುಧಾರಿಸುವಲ್ಲಿ ಮುಖ್ಯ ಪಾತ್ರವಹಿಸುವ ಗ್ರಾಮೀಣ ರಸ್ತೆಗಳನ್ನು ವರ್ಷಪೂರ್ತಿ ಉತ್ತಮ ಗುಣಮಟ್ಟದಲ್ಲಿ ಕಾಪಾಡಿಕೊಳ್ಳುವ ಹಿನ್ನೆಲೆಯಲ್ಲಿ ʼಪ್ರಗತಿಪಥʼ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿ ಪಡಿಸುವುದರಿಂದ ಸಾಮೂಹಿಕ ಸಾರಿಗೆ ಸಂವಹನವನ್ನು ಮೇಲ್ದರ್ಜೆಗೆ ಏರಿಸಬಹುದಾಗಿದ್ದು, ಈ ಮೂಲಕ ಕೃಷಿ ಮಾರುಕಟ್ಟೆಗಳು, ಶಿಕ್ಷಣ, ಆರೋಗ್ಯ ಸೌಲಭ್ಯಗಳಿಗೆ ಒತ್ತಾಸೆಯಾಗಲಿದೆ, ರಸ್ತೆಗಳನ್ನು ಸುಸ್ಥಿತಿಗೆ ತರುವುದರಿಂದ ಕೃಷಿ ಉತ್ಪಾದಕತೆ ಹೆಚ್ಚುವುದಲ್ಲದೆ ರೈತರ ಜೀವನಮಟ್ಟ ಸುಧಾರಣೆಯಾಗಲಿದೆ, ಗುಡ್ಡಗಾಡು ಪ್ರದೇಶದಲ್ಲಿ ಸಂಭವಿಸಬಹುದಾದ ಭೂಕುಸಿತ, ನೆರೆ ಹಾವಳಿ ಮುಂತಾದ ವಿಪತ್ತುಗಳ ನಿರ್ವಹಣೆ, ಮೀನುಗಾರಿಕೆ ಪ್ರದೇಶಗಳಿಗೆ ಸರ್ವಋತು ಸಂಪರ್ಕ ರಸ್ತೆ ಸೌಲಭ್ಯಗಳ ಮೂಲಕ ʼಪ್ರಗತಿಪಥʼ ರಾಜ್ಯದ ರಸ್ತೆಗಳ ಸುಧಾರಣೆಯಲ್ಲಿ ಬಹು ಮುಖ್ಯ ಪಾತ್ರವಹಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



