ವಿಧಾನಸೌಧ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಭೂಮಿ ಪೂಜೆ
ವಿಧಾನಸೌಧ ಆವರಣದಲ್ಲಿ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಭೂಮಿ ಪೂಜೆ ನೆರವೇರಿಸಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾನೂನು ಸಚಿವ ಎಚ್. ಕೆ. ಪಾಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಭೂಮಿ ಪೂಜೆ ನೆರವೇರಿಸಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾನೂನು ಸಚಿವ ಎಚ್. ಕೆ. ಪಾಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನಂತರ ಮಾತನಾಡಿದ ಮುಖ್ಯಮಂತ್ರಿ, ವಿಧಾನಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಇದೇ ವರ್ಷದ ನವೆಂಬರ್ ಒಳಗೆ ಕಾಮಗಾರಿ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ. ಇದೊಂದು ಉತ್ತಮವಾದ ಕೆಲಸವಾಗಿದ್ದು, ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ. ಅನೇಕ ರಾಜಕಾರಣಿಗಳ ಪ್ರತಿಮೆಗಳನ್ನು ಸ್ಥಾಪಿಸಿದ್ದೇವೆ. ಭುವನೇಶ್ವರಿ ಪ್ರತಿಮೆ ವಿಧಾನಸೌಧದ ಆಕರ್ಷಣೆಯನ್ನು ಇಮ್ಮಡಿಗೊಳಿಸುತ್ತದೆ ಎಂದು ಭಾವಿಸಿರುವುದಾಗಿ ತಿಳಿಸಿದರು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಅವರ, ಬಸವಣ್ಣನವರ, ಕೆಂಪೇಗೌಡರು ಸೇರಿದಂತೆ ಅನೇಕ ನಾಯಕರ ಪ್ರತಿಮೆಗಳಿವೆ. ಈ ಶಕ್ತಿ ಕೇಂದ್ರದಲ್ಲಿ ನಾಡ ದೇವಿ ಭುವನೇಶ್ವರಿ ತಾಯಿ ಪ್ರತಿಮೆ ಇರಬೇಕು. ಇಲ್ಲಿಗೆ ಭೇಟಿ ನೀಡುವವರು ದೇವಿಯ ಆಶೀರ್ವಾದ ಪಡೆದುಕೊಳ್ಳಬೇಕು ಎಂಬುದು ನಮ್ಮ ಆಶಯ. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿದ್ದು ಈ ನೆನಪಿಗಾಗಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ಸ್ಥಾಪಿಸಲಾಗುತ್ತಿದೆ ಎಂದರು.
“ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿ ಮೊದಲಬಾರಿಗೆ ಕಾನೂನು ಮಾಡಲಾಯಿತು. ಇದಕ್ಕೆ ಅನೇಕ ಕನ್ನಡ ಸಂಘಟನೆಗಳು ಹೋರಾಟ ಮಾಡಿವೆ. ಒಂದಷ್ಟು ಬಾರಿ ಕಾನೂನು ಕೈಗೆ ತೆಗೆದುಕೊಂಡಾಗ ರಾಜಿಯಾಗದೆ ಕೆಲಸ ಮಾಡಿದ್ದೇವೆ. ಜೊತೆಗೆ ಕನ್ನಡ ಉಳಿಸುವ ಕೆಲಸವನ್ನು ಮಾಡಿದ್ದೇವೆ. ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ ಎಂದು ಆಶಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



