'ಸುಮಲತಾರಿಂದ ಭಿಕ್ಷೆ ಹಾಕಿಸಿಕೊಂಡ ಮಗ': HDK ನಿಂದಿಸಿದ್ದ ದರ್ಶನ್ ಅಭಿಮಾನಿ ವಿರುದ್ಧ ಜೆಡಿಎಸ್ ದೂರು!
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ದರ್ಶನ್ ಅಭಿಮಾನಿ ಮಂಗಳಾ ವಿರುದ್ಧ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಡ್ಯ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಿದ ಆರೋಪದ ಮೇಲೆ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಇದೀಗ ದರ್ಶನ ಅವರ ಮಹಿಳಾ ಅಭಿಮಾನಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ದೂರು ನೀಡಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ದರ್ಶನ್ ಅಭಿಮಾನಿ ಮಂಗಳಾ ವಿರುದ್ಧ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಜಾನಿಕೀರಾಮ್ ಎಂಬುವರು ದೂರು ನೀಡಿದ್ದಾರೆ.
ನಟ ದರ್ಶನ್ ಮೇಲೆ ಕೊಲೆ ಆರೋಪ ಬರುವಂತೆ ಹೆಚ್ .ಡಿ ಕುಮಾರಸ್ವಾಮಿ ಮಾಡಿದ್ದಾನೆ. ದುಡ್ಡು ಕೊಟ್ಟು ದರ್ಶನ್ ವಿರುದ್ದ ಧಿಕ್ಕಾರ ಕೂಗಿಸುತ್ತೀಯಾ? ಮಾಜಿ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ನಿನಗೆ ಸ್ಪರ್ಧಿಸಲು ಅವಕಾಶ ಕೊಟ್ಟಿರುವುದಕ್ಕೆ ಡಿ ಬಾಸ್ ವಿರುದ್ಧ ಸ್ಕೆಚ್ ಹಾಕುತ್ತೀಯಾ? ಸುಮಲತಾ ಅವರಿಂದ ಭಿಕ್ಷೆ ಹಾಕಿಸಿಕೊಂಡ ಮಗ ಎಂದು ಏಕವಚನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ದರ್ಶನ ಅಭಿಮಾನಿ ಮಂಗಳಾ ಅವರು ನಿಂದಿಸಿದ್ದರು. ಈ ಹಿನ್ನಲೆಯಲ್ಲಿ ಮಂಗಳ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಕೆ.ಆರ್ ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



