KSRTC ಬಸ್‌ಗಳಲ್ಲಿ 3,754 ಮಂದಿ ಟಿಕೆಟ್ ರಹಿತ ಪ್ರಯಾಣ: 6.54 ಲಕ್ಷ ರೂ. ದಂಡ ವಸೂಲಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ಸುಗಳಲ್ಲಿ ಮೇ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ 3,754 ಪ್ರಯಾಣಿಕರಿಂದ ರಾಜ್ಯದಾದ್ಯಂತ 6.54 ಲಕ್ಷ ರೂಪಾಯಿ ದಂಡವನ್ನು ವಸೂಲಿ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ಸುಗಳಲ್ಲಿ ಮೇ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ 3,754 ಪ್ರಯಾಣಿಕರಿಂದ ರಾಜ್ಯದಾದ್ಯಂತ 6.54 ಲಕ್ಷ ರೂಪಾಯಿ ದಂಡವನ್ನು ವಸೂಲಿ ಮಾಡಲಾಗಿದೆ.
ಕೆಎಸ್ಆರ್‌ಟಿಸಿ ನಿಗಮವು ಟಿಕೆಟ್ ರಹಿತ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಿದ್ದು, ಕರ್ನಾಟಕ ಮತ್ತು ನೆರೆಯ ರಾಜ್ಯಗಳಲ್ಲಿ ಸಂಚರಿಸುವ ಸಂಸ್ಥೆಯ 42,680 ಬಸ್‌ಗಳನ್ನು ಪರಿಶೀಲಿಸಿದೆ.
3,708 ಚಿಲ್ಲರೆ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, 3,754 ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ. ನಿಗಮದ ಆದಾಯದಲ್ಲಿ 88,429 ಸೋರಿಕೆ ಪತ್ತೆಯಾಗಿದ್ದು, ಅದನ್ನು ದಂಡ ಸಹಿತ ವಸೂಲಿ ಮಾಡಲಾಗಿದೆ ಎಂದು ನಿಗಮ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದು, ವಿಭಾಗೀಯ ಮತ್ತು ಕೇಂದ್ರೀಯ ಅಧಿಕಾರಿಗಳ ಮೂಲಕ ಪ್ರತಿದಿನ ಅಂತಹ ಪ್ರಯಾಣಿಕರ ಮೇಲೆ ನಿಗಾ ಇಡುವುದಾಗಿ ಕೆಎಸ್‌ಆರ್‌ಟಿಸಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



