ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡನೆ!
ಕೆಲ ವಾರಗಳ ಹಿಂದಷ್ಟೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಹೆಚ್ ಡಿ ರೇವಣ್ಣ ಪರ ವಾದ ಮಂಡಿಸಿ ಅವರಿಗೆ ಜಾಮೀನು ಮಂಜೂರು ಮಾಡಲು ಕಾರಣರಾಗಿದ್ದ ಸಿವಿ ನಾಗೇಶ್ ಅವರು ಈಗ ದರ್ಶನ್ ಪರವಾಗಿ ವಾದ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಪರ ವಕೀಲರಾದ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರು ಈಗಾಗಲೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಾದಿಸುತ್ತಿದ್ದು, ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ಇನ್ನಷ್ಟು ಪ್ರಬಲವಾಗಿ ವಾದಿಸಲು ಅನುಭವಿ, ಹಿರಿಯ ವಕೀಲರನ್ನು ಅವರ ಪತ್ನಿ ವಿಜಯಲಕ್ಷ್ಮಿ ನೇಮಿಸಿದ್ದಾರೆ ಎಂದು ತಿಳಿದುಬಂದಿದೆ.
ಕೆಲ ವಾರಗಳ ಹಿಂದಷ್ಟೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಹೆಚ್ ಡಿ ರೇವಣ್ಣ ಪರ ವಾದ ಮಂಡಿಸಿ ಅವರಿಗೆ ಜಾಮೀನು ಮಂಜೂರು ಮಾಡಲು ಕಾರಣರಾಗಿದ್ದ ಸಿವಿ ನಾಗೇಶ್ ಅವರು ಈಗ ದರ್ಶನ್ ಪರವಾಗಿ ವಾದ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ವಿಜಯಲಕ್ಷ್ಮಿ ದರ್ಶನ್ ಹಾಗೂ ಅವರ ತಂದೆ-ತಾಯಿಯ ಪರವಾಗಿ ದರ್ಶನ್ ಪರವಾಗಿ ನ್ಯಾಯಾಲಯದಲ್ಲಿ ಮಂಡಿಸುತ್ತಿದ್ದರು. ಇದೀಗ ಸಿವಿ ನಾಗೇಶ್ ಅವರು ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರ ಬದಲಿಗೆ ವಾದ ಮಂಡಿಸುತ್ತಾರೆಯೇ ಅಥವಾ ಅನಿಲ್ ಬಾಬು, ರಂಗನಾಥ ರೆಡ್ಡಿ ಅವರುಗಳ ಜೊತೆಗೆ ಸಿವಿ ನಾಗೇಶ್ ಸಹ ವಾದ ಮಂಡಿಸುತ್ತಾರೆಯೇ ಕಾದು ನೋಡಬೇಕಿದೆ.
ಆರೋಪಿಯೊಬ್ಬನ ಪರವಾಗಿ ಇಬ್ಬರು ವಕೀಲರು ವಾದ ಮಂಡಿಸುವ ಅವಕಾಶ ಇದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ವಾದ ಮಂಡಿಸಿದರೆ, ದರ್ಶನ್ ಪರವಾಗಿ ಸಿವಿ ನಾಗೇಶ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



