ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಹೊಡೆದಾಟ; ಸ್ವಾಮೀಜಿ ಬರ್ಬರ ಕೊಲೆ
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ ವೇಳೆ ಹಿರಿಯ ಸ್ವಾಮೀಜಿ ಒಬ್ಬರ ಬರ್ಬರ ಹತ್ಯೆಯಾಗಿದೆ.

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ ವೇಳೆ ಹಿರಿಯ ಸ್ವಾಮೀಜಿ ಒಬ್ಬರ ಬರ್ಬರ ಹತ್ಯೆಯಾಗಿದೆ.
ಕೊಲೆಯ ಸ್ವಾಮಿಜೀಯನ್ನು ಆಚಾರ್ಯ ಚಿನ್ಮಯಾನಂದ ಎಂದು ತಿಳಿದುಬಂದಿದೆ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಂತಳ್ಳಿ ಗ್ರಾಮದ ನಾಲ್ಕು ಎಕರೆ ಜಾಗದಲ್ಲಿ ಆಶ್ರಮ ಇದ್ದು ಹಲವು ವರ್ಷಗಳಿಂದ ಜಾಗದ ಕುರಿತಂತೆ ವಿವಾದ ನಡೆಯುತ್ತಿದೆ. ಇಂದು ಬೆಳಿಗ್ಗೆ ಕೋರ್ಟ್ಗೆ ದಾಖಲೆ ಸಹಿತ ಹೋಗುವ ವೇಳೆ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದೆ.
ಮಾರಣಾಂತಿಕ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಚಿನ್ಮಯಾನಂದ ಅವರನ್ನು ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಮೃತಪಟ್ಟಿದ್ದಾರೆ.
ಈ ಕೊಲೆ ಸಂಬಂಧ ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಅರುಣ್ ಎಂಬುವವರನ್ನು ಮಾಲೂರು ಪೊಲೀಸ್ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



